image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ಬಿಹಾರದ ಯುವಕರಿಗೆ ಭರ್ಜರಿ ಗಿಫ್ಟ್ ಕೊಟ್ಟ ಮೋದಿ : 62,000 ಕೋಟಿ ರೂ. ಯೋಜನೆಗಳಿಗೆ ಚಾಲನೆ

ಬಿಹಾರದ ಯುವಕರಿಗೆ ಭರ್ಜರಿ ಗಿಫ್ಟ್ ಕೊಟ್ಟ ಮೋದಿ : 62,000 ಕೋಟಿ ರೂ. ಯೋಜನೆಗಳಿಗೆ ಚಾಲನೆ

ಪಾಟ್ನಾ: ಪ್ರಧಾನಮಂತ್ರಿ ನರೇಂದ್ರ ಮೋದಿ ಬಿಹಾರದ ಯುವಕರಿಗೆ ಮಹತ್ವದ ಉಡುಗೊರೆ ನೀಡಿದ್ದಾರೆ. ಶನಿವಾರ ನಡೆದ ಯುವ ಸಂವಾದ ಕಾರ್ಯಕ್ರಮದಲ್ಲಿ ವರ್ಚುವಲ್ ಆಗಿ ಭಾಗವಹಿಸಿದ ಅವರು, 62,000 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಯುವ ಕೇಂದ್ರಿತ ಯೋಜನೆಗಳಿಗೆ ಚಾಲನೆ ನೀಡಿದರು. ದೇಶಾದ್ಯಂತ 1,000 ಸರ್ಕಾರಿ ಐಟಿಐಗಳನ್ನು ಮೇಲ್ದರ್ಜೆಗೇರಿಸುವ ಪಿಎಂ-ಸೇತು ಯೋಜನೆಗೆ ಚಾಲನೆ ನೀಡಿದರು. ಈ ಯೋಜನೆಯಡಿ 200 ಹಬ್ ಐಟಿಐಗಳು ಮತ್ತು 800 ಸ್ಪೋಕ್ ಐಟಿಐಗಳು ಒಳಗೊಂಡಿದ್ದು, ಹಬ್-ಅಂಡ್-ಸ್ಪೋಕ್ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗಲಿದೆ.

ಅಲ್ಲದೇ, ಮುಖ್ಯಮಂತ್ರಿ ನಿಶ್ಚಯ್ ಸ್ವಯಂ ಸಹಾಯತ ಭಟ್ಟ ಯೋಜನೆಗೂ ಮೋದಿ ಚಾಲನೆ ನೀಡಿದರು. ಈ ಯೋಜನೆಯಡಿ ಬಿಹಾರದ ಯುವಕರ ಖಾತೆಗಳಿಗೆ ಎರಡು ವರ್ಷಗಳ ಕಾಲ ಪ್ರತಿ ತಿಂಗಳು 1,000 ರೂ. ಆರ್ಥಿಕ ಸಹಾಯವನ್ನು ಜಮಾ ಮಾಡಲಾಗುವುದು. ಇದರಿಂದ ಸುಮಾರು 5 ಲಕ್ಷ ಯುವಕರು ಪ್ರಯೋಜನ ಪಡೆಯಲಿದ್ದಾರೆ. ಈ ಯೋಜನೆಯ ಉದ್ದೇಶ, ಮಧ್ಯಂತರ ಮತ್ತು ಪದವಿ ಶಿಕ್ಷಣ ಪೂರ್ಣಗೊಳಿಸಿದರೂ ನಿರುದ್ಯೋಗಿಗಳಾಗಿರುವ ಯುವಕರಿಗೆ ಆರ್ಥಿಕ ನೆರವು ಒದಗಿಸಿ, ಉದ್ಯೋಗ ಹುಡುಕುವ ಪ್ರಯತ್ನಕ್ಕೆ ಬೆಂಬಲ ನೀಡುವುದಾಗಿದೆ.

Category
ಕರಾವಳಿ ತರಂಗಿಣಿ