image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ಬಿಹಾರ ಚುನಾವಣೆ ಸನಿಹದಲ್ಲಿ ಆರ್ ಜೆಡಿಗೆ 'ಬಿಗ್ ಶಾಕ್' ನೀಡಿದ ದೆಹಲಿ ನ್ಯಾಯಾಲಯ!

ಬಿಹಾರ ಚುನಾವಣೆ ಸನಿಹದಲ್ಲಿ ಆರ್ ಜೆಡಿಗೆ 'ಬಿಗ್ ಶಾಕ್' ನೀಡಿದ ದೆಹಲಿ ನ್ಯಾಯಾಲಯ!

ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವಂತೆಯೇ ರಾಷ್ಟ್ರ ರಾಜಧಾನಿಯ ನ್ಯಾಯಾಲಯವೊಂದು ಆರ್ ಜೆಡಿಗೆ ಬಿಗ್ ಶಾಕ್ ನೀಡಿದೆ. ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮ ( IRCTC) ಹಗರಣದಲ್ಲಿ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ, ಅವರ ಮಗ, ಹಾಲಿ ವಿರೋಧ ಪಕ್ಷದ ನಾಯಕರಾದ ತೇಜಸ್ವಿ ಯಾದವ್ ವಿರುದ್ಧ ಆರೋಪಗಳನ್ನು ಪಟ್ಟಿ ಮಾಡಿದೆ. 

ಮುಂದಿನ ತಿಂಗಳು ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ವಿಚಾರಣೆಗೆ ವೇದಿಕೆಯನ್ನು ಸಿದ್ಧಪಡಿಸುತ್ತಿದೆ. ವಿಶೇಷ ನ್ಯಾಯಾಧೀಶ ವಿಶಾಲ್ ಗೊಗ್ನೆ ಅವರು ರಾಬ್ರಿ ದೇವಿ ಮತ್ತು ತೇಜಸ್ವಿ ಯಾದವ್ ವಿರುದ್ಧ ಕ್ರಿಮಿನಲ್ ಪಿತೂರಿ ಮತ್ತು ವಂಚನೆಯ ಸಾಮಾನ್ಯ ಆರೋಪಗಳನ್ನು ರೂಪಿಸಿದ್ದಾರೆ. ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ (IRCTC) ಹೋಟೆಲ್‌ಗಳ ಕಾರ್ಯಾಚರಣೆಯ ಗುತ್ತಿಗೆಯನ್ನು ಖಾಸಗಿ ಸಂಸ್ಥೆಗೆ ನೀಡುವಲ್ಲಿನ ಅಕ್ರಮಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಲಾಲು ಪ್ರಸಾದ್ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿಯೂ ನ್ಯಾಯಾಲಯ ಆರೋಪ ಹೊರಿಸಿದೆ. ಪ್ರಕರಣದ ವಿವರವಾದ ಆದೇಶಕ್ಕಾಗಿ ಕಾಯಲಾಗುತ್ತಿದೆ.

Category
ಕರಾವಳಿ ತರಂಗಿಣಿ