image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿಗೆ : 20ಕ್ಕೂ ಹೆಚ್ಚು ಜನ ಸಜೀವ ದಹನ.?

ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿಗೆ : 20ಕ್ಕೂ ಹೆಚ್ಚು ಜನ ಸಜೀವ ದಹನ.?

ಅಮರಾವತಿ: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಚಿನ್ನ ತೆಕೂರು ಗ್ರಾಮದಲ್ಲಿ ಶುಕ್ರವಾರ ಮುಂಜಾನೆ ಕಾವೇರಿ ಟ್ರಾವೆಲ್ಸ್ ನ ಬಸ್ ಗೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಕನಿಷ್ಠ 20 ಜನರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಬೆಳಗಿನ ಜಾವ 3.30 ಕ್ಕೆ ಅಪಘಾತ ಸಂಭವಿಸಿದದ್ದು, ಇಲ್ಲಿಯವರೆಗೆ ವಾಹನದಿಂದ ಸುಟ್ಟು ಕರಕಲಾದ  ಶವಗಳನ್ನು ಹೊರತೆಗೆಯಲಾಗಿದೆ. 40ಕ್ಕೂ ಹೆಚ್ಚು ಪ್ರಯಾಣಿಕರೊಂದಿಗೆ ಹೈದರಾಬಾದ್‌ನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಕಾವೇರಿ ಟ್ರಾವೆಲ್ಸ್ ಬಸ್, ಬೈಕ್ ಡಿಕ್ಕಿಯ ನಂತರ ಕೆಲವೇ ಕ್ಷಣಗಳಲ್ಲಿ ಬೆಂಕಿಗೆ ಆಹುತಿಯಾಗಿದೆ. ಗಾಯಾಳುಗಳನ್ನು ಕರ್ನೂಲ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಬಸ್ ಚಾಲಕ ಮತ್ತು ಸಹಾಯಕ ಇಬ್ಬರೂ ಅಪಘಾತದಿಂದ ಪಾರಾಗಿದ್ದಾರೆ.

Category
ಕರಾವಳಿ ತರಂಗಿಣಿ