image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ಮೊಹಮ್ಮದ್ ಅಜರುದ್ದೀನ್ ಪ್ರಮಾಣ: ರೆಡ್ಡಿ ಸಂಪುಟದ ಮೊದಲ ಮುಸ್ಲಿಂ ಸಚಿವ

ಮೊಹಮ್ಮದ್ ಅಜರುದ್ದೀನ್ ಪ್ರಮಾಣ: ರೆಡ್ಡಿ ಸಂಪುಟದ ಮೊದಲ ಮುಸ್ಲಿಂ ಸಚಿವ

ಹೈದರಾಬಾದ್: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ಕಾಂಗ್ರೆಸ್ ಮುಖಂಡ ಮೊಹಮ್ಮದ್ ಅಜರುದ್ದೀನ್ ಅವರು ತೆಲಂಗಾಣ ಸರ್ಕಾರದ ಸಚಿವರಾಗಿ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಜಿಷ್ಣು ದೇವ್ ವರ್ಮಾ ಅವರು ಅಜರುದ್ದೀನ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಪ್ರಮಾಣ ವಚನ ಸ್ವೀಕರಿಸುವ ಮೂಲಕ ಅಜರುದ್ದೀನ್ ಅವರು ರೇವಂತ ರೆಡ್ಡಿ ಸರ್ಕಾರದಲ್ಲಿ ಸಚಿವರಾದ ಅಲ್ಪಸಂಖ್ಯಾತ ಸಮುದಾಯದ ಮೊದಲ ಸಚಿವರಾದರು. ಒಂದು ಲಕ್ಷಕ್ಕೂ ಹೆಚ್ಚು ಮುಸ್ಲಿಂ ಮತದಾರರು ಇರುವ ಜುಬಿಲಿ ಹಿಲ್ಸ್ ಕ್ಷೇತ್ರದ ಉಪ ಚುನಾವಣೆ ನಡೆಯಲಿರುವ ಕಾರಣದಿಂದಾಗಿ ಅಜರುದ್ದೀನ್ ಅವರನ್ನು ಸಂಪುಟಕ್ಕೆ ನೇಮಕ ಮಾಡಲಾಗಿದೆ ಎನ್ನಲಾಗಿದೆ. ಬಿಆರ್‌ಎಸ್ ಶಾಸಕ ಮಾಗಂಟಿ ಗೋಪಿನಾಥ್ ಅವರು ಈ ವರ್ಷದ ಜೂನ್‌ನಲ್ಲಿ ಹೃದಯಾಘಾತದಿಂದಾಗಿ ಮೃತಪಟ್ಟಿದ್ದರಿಂದ ಈ ಕ್ಷೇತ್ರವು ತೆರವುಗೊಂಡಿತ್ತು. ಅಜರುದ್ದೀನ್ ಅವರನ್ನು ವಿಧಾನ ಪರಿಷತ್‌ ಸದಸ್ಯರಾಗಿ ತೆಲಂಗಾಣ ಸರ್ಕಾರವು ಆಗಸ್ಟ್ ಕೊನೆಯ ವಾರದಲ್ಲಿ ನಾಮನಿರ್ದೇಶನ ಮಾಡಿತ್ತು. ಆದರೆ ರಾಜ್ಯಪಾಲರು ಇನ್ನೂ ಅನುಮೋದನೆ ನೀಡಿಲ್ಲ. 2023ರ ಚುನಾವಣೆಯಲ್ಲಿ ಅವರು ಜುಬಿಲಿ ಹಿಲ್ಸ್‌ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿದ್ದರು.

Category
ಕರಾವಳಿ ತರಂಗಿಣಿ