ಚೆನ್ನೈ - ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಐಎಡಿಎಂಕೆ ಪಕ್ಷವು ಬರಪೂರ ಕೊಡುಗೆಗಳನ್ನು ಘೋಷಣೆ ಮಾಡಿದೆ. ಎಐಡಿಎಂಕೆ ಅಧಿಕಾರಕ್ಕೆ ಬಂದರೆ, ಮಹಿಳೆಯರಿಗೆ ಮಾಸಿಕ 2 ಸಾವಿರ ರೂ., ಮಹಿಳೆಯರ ಜೊತೆ ಪುರುಷರಿಗೂ ಉಚಿತ ಬಸ್ ಸೇವೆ ವಿಸ್ತರಣೆ ಮಾಡುವುದಾಗಿ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಪಳನಿಸ್ವಾಮಿ ಘೋಷಿಸಿದ್ದಾರೆ. ಇಷ್ಟೇ ಅಲ್ಲದೇ ಪ್ರತಿಯೊಬ್ಬರಿಗೂ ಸೂರು ಕಲ್ಪಿಸಲಾಗುವುದು. ಇದರೊಟ್ಟಿಗೆ ಪಕ್ಷವು ಸಾಮಾಜಿಕ ನ್ಯಾಯದ ಪರವಾಗಿ ಹೋರಾಡಲಿದ್ದು, ಜನರ ಕಲ್ಯಾಣಕ್ಕಾಗಿ ಕೆಲ ಕೊಡುಗೆಗಳನ್ನು ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.