image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ಬಿಹಾರದ ಜನತೆಗೆ ಧನ್ಯವಾದ ಸಲ್ಲಿಸಿದ ಸಿಎಂ ನಿತೀಶ್ ಕುಮಾರ್

ಬಿಹಾರದ ಜನತೆಗೆ ಧನ್ಯವಾದ ಸಲ್ಲಿಸಿದ ಸಿಎಂ ನಿತೀಶ್ ಕುಮಾರ್

ಬಿಹಾರ : ಬಿಹಾರದ ಜನತೆಗೆ ಧನ್ಯವಾದ ಸಲ್ಲಿಸಿರುವ ಸಿಎಂ ನಿತೀಶ್ ಕುಮಾರ್, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆ. ರಾಜ್ಯಸಭಾ ಸದಸ್ಯರಾಗುವ ಇಚ್ಛೆ ವ್ಯಕ್ತಪಡಿಸಿರುವ ಅವರು, ತಮ್ಮ ಪುತ್ರ ನಿಶಾಂತ್ ಕುಮಾರ್‌ರ ರಾಜಕೀಯ ಪ್ರವೇಶಕ್ಕೆ ದಾರಿ ಮಾಡಿಕೊಡುತ್ತಿದ್ದಾರೆ ಎನ್ನಲಾಗಿದೆ. ನಾನು ಸಂಪೂರ್ಣ ಭಕ್ತಿಯಿಂದ ಸೇವೆ ಸಲ್ಲಿಸಿದ್ದೇನೆ ಎಂದು ಹೇಳುವ ಮೂಲಕ ಬಿಹಾರದ ಜನತೆಗೆ ಸಿಎಂ ನಿತೀಶ್ ಕುಮಾರ್ ಧನ್ಯವಾದ ಸಲ್ಲಿಕೆ ಮಾಡಿದ್ದಾರೆ ಈ ಮೂಲಕ ನಿತೀಶ್ ಕುಮಾರ್, ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಸುಳಿವು ನೀಡಿದ್ದಾರೆ. ಎರಡು ದಶಕಗಳಿಗೂ ಹೆಚ್ಚು ಕಾಲ, ನಂಬಿಕೆ ಮತ್ತು ಬೆಂಬಲವನ್ನು ನಿರಂತರವಾಗಿ ಉಳಿಸಿಕೊಂಡಿದ್ದೀರಿ. ಅದಕ್ಕಾಗಿಯೇ ನಾನು ಬಿಹಾರ ಮತ್ತು ನಿಮ್ಮೆಲ್ಲರಿಗೂ ಸಂಪೂರ್ಣ ಭಕ್ತಿಯಿಂದ ಸೇವೆ ಸಲ್ಲಿಸಿದ್ದೇನೆ. ನಿಮ್ಮ ನಂಬಿಕೆ ಮತ್ತು ಬೆಂಬಲದಿಂದಾಗಿ ಬಿಹಾರ ಅಭಿವೃದ್ಧಿಯತ್ತ ಸಾಗುತ್ತಿದೆ. ನಿಮಗೆ ನನ್ನ ಕೃತಜ್ಞತೆ ಎಂದು ಸಿಎಂ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

"ನಾನು ನನ್ನ ಸಂಸದೀಯ ಜೀವನವನ್ನು ಪ್ರಾರಂಭಿಸಿದ ಸಮಯದಿಂದ, ಬಿಹಾರ ವಿಧಾನಸಭೆಯ ಎರಡೂ ಸದನಗಳ ಜೊತೆಗೆ ಸಂಸತ್ತಿನ ಎರಡೂ ಸದನಗಳ ಸದಸ್ಯರಾಗಬೇಕೆಂಬ ಆಸೆ ನನಗಿತ್ತು. ಹಾಗಾಗಿ ನಾನು ಈ ಚುನಾವಣೆಯಲ್ಲಿ ರಾಜ್ಯಸಭೆಯ ಸದಸ್ಯರಾಗಲು ಬಯಸುತ್ತೇನೆ ಎಂದು ನಿತೀಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ. ನಿಮ್ಮೊಂದಿಗಿನ ನನ್ನ ಈ ಸಂಬಂಧವು ಭವಿಷ್ಯದಲ್ಲಿಯೂ ಮುಂದುವರಿಯುತ್ತದೆ ಮತ್ತು ಅಭಿವೃದ್ಧಿ ಹೊಂದಿದ ಬಿಹಾರವನ್ನು ನಿರ್ಮಿಸಲು ನಿಮ್ಮೊಂದಿಗೆ ಒಟ್ಟಾಗಿ ಕೆಲಸ ಮಾಡುವ ನನ್ನ ಸಂಕಲ್ಪವು ಮೊದಲಿನಂತೆಯೇ ಇರುತ್ತದೆ. ರಚನೆಯಾಗಲಿರುವ ಹೊಸ ಸರ್ಕಾರಕ್ಕೆ ನನ್ನ ಸಂಪೂರ್ಣ ಬೆಂಬಲ ಮತ್ತು ಮಾರ್ಗದರ್ಶನ ಇರುತ್ತದೆ ಎಂದು ನಿತೀಶ್ ಕುಮಾರ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ. ಜೀವನದುದ್ದಕ್ಕೂ ವಂಶಪಾರಂಪರ್ಯ ರಾಜಕೀಯ ವಿರೋಧಿಸುತ್ತಲೇ ಬಂದಿದ್ದ ನಿತೀಶ್, ಇದೀಗ ತಮ್ಮ ಪುತ್ರ ನಿಶಾಂತ್‌ ಕುಮಾರ್‌ ರಾಜಕೀಯ ಪ್ರವೇಶಕ್ಕೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.

Category
ಕರಾವಳಿ ತರಂಗಿಣಿ