ನವದೆಹಲಿ : ಏಪ್ರಿಲ್ 1ರಿಂದ ಪ್ಯಾನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ನಿಯಮ ಬದಲಾವಣೆಯಾಗಲಿದೆ. ಪ್ಯಾನ್ ಕಾರ್ಡ್ ಗೆ ಅರ್ಜಿ ಪ್ರಕ್ರಿಯೆ ಮತ್ತು ಹಣಕಾಸು ವಹಿವಾಟಿಗೆ ಸಂಬಂಧಿಸಿದ ನಿಯಮಗಳಲ್ಲಿ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಆದಾಯ ತೆರಿಗೆ ಇಲಾಖೆಯು ಮಹತ್ವದ ಬದಲಾವಣೆಗಳನ್ನು ಘೋಷಣೆ ಮಾಡಿದೆ. ಇದುವರೆಗೆ ಆಧಾರ್ ಕಾರ್ಡ್ ಮೂಲಕ ಮಾತ್ರ ಪ್ಯಾನ್ ಕಾರ್ಡ್ ಪಡೆಯಲು ಅವಕಾಶ ಇತ್ತು. ಏಪ್ರಿಲ್ 1ರಿಂದ ಆಧಾರ್ ಕಾರ್ಡ್ ಜೊತೆಗೆ ಜನನ ಪ್ರಮಾಣ ಪತ್ರ, ಮತದಾರರ ಗುರುತಿನ ಚೀಟಿ, 10ನೇ ತರಗತಿ ಅಂಕಪಟ್ಟಿ, ಪಾಸ್ಪೋರ್ಟ್ ನಂತಹ ಹೆಚ್ಚುವರಿ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕಿದೆ, ಮಾರ್ಚ್ 31ರೊಳಗೆ ಅರ್ಜಿ ಸಲ್ಲಿಸುವವರು ಆಧಾರ್ ಮೂಲಕ ಪ್ಯಾನ್ ಕಾರ್ಡ್ ಪಡೆದುಕೊಳ್ಳಬಹುದಾಗಿದೆ. ಏಪ್ರಿಲ್ 1ರಿಂದ ಆಧಾರ್ ಜೊತೆಗೆ ಜನನ ಪ್ರಮಾಣ ಪತ್ರ, ವೋಟರ್ ಐಡಿ, 10ನೇ ತರಗತಿಯ ಅಂಕಪಟ್ಟಿಯಂತಹ ಹೆಚ್ಚುವರಿ ದಾಖಲೆ ಕಡ್ಡಾಯವಾಗಿ ಸಲ್ಲಿಸಬೇಕಿದೆ ಎಂದು ಹೇಳಲಾಗಿದೆ.