image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

100 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಪಂಜಾಬ್ ಸಚಿವ ಸಂಜೀವ್ ಅರೋರಾ ಇಡಿ ವಶಕ್ಕೆ

100 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಪಂಜಾಬ್ ಸಚಿವ ಸಂಜೀವ್ ಅರೋರಾ ಇಡಿ ವಶಕ್ಕೆ

ಪಂಜಾಬ್ : ಬರೋಬ್ಬರಿ 100 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್‌ನ ಆಮ್ ಆದ್ಮಿ ಪಕ್ಷದ ಸಚಿವ ಸಂಜೀವ್ ಅರೋರಾ ಅವರನ್ನು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಇಂದು ಬಂಧಿಸಿದ್ದಾರೆ. ಜಿಎಸ್‌ಟಿ ವ್ಯವಹಾರದಲ್ಲಿ ದೊಡ್ಡ ಮಟ್ಟದ ಅಕ್ರಮ ಎಸಗಿರುವ ಗಂಭೀರ ಆರೋಪ ಎದುರಿಸುತ್ತಿದ್ದ ಅರೋರಾ ಕಳೆದ ಕೆಲವು ದಿನಗಳಿಂದ ಇಡಿ ರೇಡಾರ್‌ನಲ್ಲಿದ್ದರು. ಇಂದು ಮುಂಜಾನೆ ದೆಹಲಿ, ಪಂಜಾಬ್ ಮತ್ತು ಗುರುಗ್ರಾಮ್ ಸೇರಿದಂತೆ ಒಟ್ಟು ಐದು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ ಅಧಿಕಾರಿಗಳು, ಸುಮಾರು ಎಂಟು ಗಂಟೆಗಳ ಕಾಲ ಸತತ ಶೋಧ ಕಾರ್ಯ ಮತ್ತು ವಿಚಾರಣೆ ನಡೆಸಿದ ಬಳಿಕ ಅರೋರಾ ಅವರನ್ನು ವಶಕ್ಕೆ ಪಡೆದಿದ್ದಾರೆ. ಮುಖ್ಯವಾಗಿ ಮೊಬೈಲ್ ಫೋನ್ ಖರೀದಿಯಲ್ಲಿ ನಕಲಿ ಜಿಎಸ್‌ಟಿ ಬಿಲ್ ನೀಡಿದ ಮತ್ತು ಆ ಮೂಲಕ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಇವರ ಮೇಲಿದ್ದು, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಏಪ್ರಿಲ್ 17 ರಂದು ಕೂಡ ಮೊದಲ ಹಂತದ ದಾಳಿ ನಡೆದಿತ್ತು. ಇತ್ತೀಚಿನ ರಾಜಕೀಯ ಬೆಳವಣಿಗೆಗಳಲ್ಲಿ ರಾಘವ್ ಚಡ್ಡಾ ಸೇರಿದಂತೆ ಹಲವು ಪ್ರಮುಖ ನಾಯಕರು ಪಕ್ಷ ತೊರೆಯುತ್ತಿರುವ ಬೆನ್ನಲ್ಲೇ, ಪಂಜಾಬ್‌ನ ಕೈಗಾರಿಕಾ ಸಚಿವರ ಬಂಧನವು ಆಮ್ ಆದ್ಮಿ ಪಕ್ಷಕ್ಕೆ ದೊಡ್ಡ ರಾಜಕೀಯ ಹಿನ್ನಡೆಯನ್ನುಂಟು ಮಾಡಿದೆ. ಈ ಬಂಧನದಿಂದಾಗಿ ಪಂಜಾಬ್‌ನಲ್ಲಿ ಆಪ್ ಸರ್ಕಾರದ ಬುಡ ಅಲುಗಾಡತೊಡಗಿದ್ದು, ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.

Category
ಕರಾವಳಿ ತರಂಗಿಣಿ