image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ಭೋಜಶಾಲಾ ಸಂಕೀರ್ಣದಲ್ಲಿ ಭದ್ರತಾ ನಿಯಮ ಉಲ್ಲಂಘಿಸಲು ಯತ್ನಿಸಿದ ಯುವಕರಿಗೆ ಹಿರಿಯ ಪೊಲೀಸ್ ಅಧಿಕಾರಿಯ ಖಡಕ್ ಎಚ್ಚರಿಕೆ!

ಭೋಜಶಾಲಾ ಸಂಕೀರ್ಣದಲ್ಲಿ ಭದ್ರತಾ ನಿಯಮ ಉಲ್ಲಂಘಿಸಲು ಯತ್ನಿಸಿದ ಯುವಕರಿಗೆ ಹಿರಿಯ ಪೊಲೀಸ್ ಅಧಿಕಾರಿಯ ಖಡಕ್ ಎಚ್ಚರಿಕೆ!

ಭೋಜಶಾಲಾ : ​ಮಧ್ಯಪ್ರದೇಶದ ಧಾರ್ ಜಿಲ್ಲೆಯ ವಿವಾದಿತ ಭೋಜಶಾಲಾ ಸಂಕೀರ್ಣದ ಬಳಿ ಶುಕ್ರವಾರದ ನಮಾಜ್ ವೇಳೆ ಭದ್ರತಾ ನಿಯಮಗಳನ್ನು ಉಲ್ಲಂಘಿಸಿ ಒಳಗೆ ಪ್ರವೇಶಿಸಲು ಯತ್ನಿಸಿದ ಕೆಲವು ಯುವಕರಿಗೆ ಕರ್ತವ್ಯ ನಿರತ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತೀವ್ರ ತರಾಟೆಗೆ ತೆಗೆದುಕೊಂಡು ಖಡಕ್ ಎಚ್ಚರಿಕೆ ನೀಡಿದ್ದಾರೆ. ಮಧ್ಯಪ್ರದೇಶ ಹೈಕೋರ್ಟ್‌ನ ಇಂದೋರ್ ಪೀಠದ ಆದೇಶದಂತೆ ಈ ಸೂಕ್ಷ್ಮ ಪ್ರದೇಶದಲ್ಲಿ ಕಟ್ಟುನಿಟ್ಟಿನ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದ್ದು, ಈ ನಡುವೆಯೇ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲು ಯತ್ನಿಸಿದ ಯುವಕರ ವಿರುದ್ಧ ಅಧಿಕಾರಿ ಸಿಂಹಗರ್ಜನೆ ಮಾಡಿದ್ದಾರೆ. "ನಿಮಗೆ ನಿಜವಾಗಿಯೂ ಧೈರ್ಯವಿದ್ದರೆ, ಕಾನೂನನ್ನು ಕೈಗೆ ತೆಗೆದುಕೊಳ್ಳಬೇಡಿ, ಮೊದಲು ನನ್ನ ಎದುರು ಬಂದು ನಿಲ್ಲಿ" ಎಂದು ಹಿರಿಯ ಅಧಿಕಾರಿ ನೀಡಿದ ಈ ಖಡಕ್ ಎಚ್ಚರಿಕೆಯ ವಿಡಿಯೋ ಪ್ರಸ್ತುತ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಸಾರ್ವಜನಿಕರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

​ಇತ್ತೀಚೆಗಷ್ಟೇ ಮಧ್ಯಪ್ರದೇಶ ಹೈಕೋರ್ಟ್‌ನ ಇಂದೋರ್ ಪೀಠವು ಈ ವಿವಾದಿತ ಸಂಕೀರ್ಣವು ವಾಗ್ದೇವಿ (ಸರಸ್ವತಿ) ದೇವಸ್ಥಾನ ಎಂದು ಘೋಷಿಸಿ, ಹಿಂದೂಗಳಿಗೆ ಪೂಜೆ ಮಾಡಲು ಸಂಪೂರ್ಣ ಹಕ್ಕನ್ನು ನೀಡಿ ಮಹತ್ವದ ಆದೇಶ ಪ್ರಕಟಿಸಿತ್ತು. ಈ ಮೂಲಕ ಭಾರತೀಯ ಪುರಾತತ್ವ ಇಲಾಖೆ (ASI) 2003 ರಲ್ಲಿ ಹೊರಡಿಸಿದ್ದ ಆದೇಶವನ್ನು ನ್ಯಾಯಾಲಯವು ರದ್ದುಗೊಳಿಸಿದೆ. ಈ ಹಿಂದಿನ ವ್ಯವಸ್ಥೆಯಂತೆ ಪ್ರತಿ ಮಂಗಳವಾರ ಹಿಂದೂಗಳಿಗೆ ಪೂಜೆ ಸಲ್ಲಿಸಲು ಮತ್ತು ಪ್ರತಿ ಶುಕ್ರವಾರ ಮುಸ್ಲಿಮರಿಗೆ ನಮಾಜ್ ಮಾಡಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ಸುದೀರ್ಘ ಕಾನೂನು ಪ್ರಕ್ರಿಯೆ ಹಾಗೂ ಭಾರತೀಯ ಪುರಾತತ್ವ ಇಲಾಖೆಯ (ASI) ವೈಜ್ಞಾನಿಕ ಸಮೀಕ್ಷೆಯ ವರದಿಗಳ ಆಧಾರದ ಮೇಲೆ ಹೈಕೋರ್ಟ್ ಈ ಮಹತ್ವದ ತೀರ್ಪು ನೀಡಿದೆ. ಸದ್ಯ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಧಾರ್ ಜಿಲ್ಲೆಯ ಭೋಜಶಾಲಾ ಸಂಕೀರ್ಣದ ಸುತ್ತಮುತ್ತ ಅತ್ಯಂತ ಕಟ್ಟುನಿಟ್ಟಿನ ಪೊಲೀಸ್ ಭದ್ರತೆಯನ್ನು ಮುಂದುವರಿಸಲಾಗಿದೆ.

Category
ಕರಾವಳಿ ತರಂಗಿಣಿ