image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ಕಾನೂನುಬದ್ಧ: ಭಾರತೀಯ ಚುನಾವಣಾ ಆಯೋಗದ ಕ್ರಮ ಎತ್ತಿಹಿಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ಕಾನೂನುಬದ್ಧ: ಭಾರತೀಯ ಚುನಾವಣಾ ಆಯೋಗದ ಕ್ರಮ ಎತ್ತಿಹಿಡಿದ ಸುಪ್ರೀಂ ಕೋರ್ಟ್

ನವದೆಹಲಿ : ಭಾರತೀಯ ಚುನಾವಣಾ ಆಯೋಗವು (ECI) ಆರಂಭಿಸಿರುವ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ನೇತೃತ್ವದ ಪೀಠವು ಈ ಕುರಿತು ಮಹತ್ವದ ಆದೇಶ ಪ್ರಕಟಿಸಿದೆ. ಈ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯು ಸಾಮಾನ್ಯ ಮತದಾರರ ಪಟ್ಟಿ ಪರಿಷ್ಕರಣೆಗಿಂತ ಭಿನ್ನವಾಗಿದೆ ಎಂಬ ಒಂದೇ ಕಾರಣಕ್ಕೆ ಇದನ್ನು 'ಅಲ್ಟ್ರಾ ವೈರಸ್' ಅಂದರೆ ಕಾನೂನುಬಾಹಿರ ಎಂದು ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ಪೀಠವು ಸ್ಪಷ್ಟಪಡಿಸಿದೆ. ಚುನಾವಣಾ ಆಯೋಗದ ಈ ವಿಶೇಷ ಪರಿಷ್ಕರಣಾ ಕ್ರಮವನ್ನು ಕಾನೂನುಬದ್ಧ ಮತ್ತು ಸಂವಿಧಾನಬದ್ಧ ಎಂದು ಕರೆದಿರುವ ಸುಪ್ರೀಂ ಕೋರ್ಟ್, ಈ ಪ್ರಕ್ರಿಯೆಯು ಕಾನೂನುಬದ್ಧವಾಗಿ ಸಂಪೂರ್ಣ ಸಮರ್ಥನೀಯವಾಗಿದೆ ಎಂದು ಹೇಳಿದೆ. ಇದೇ ವೇಳೆ ಮಹತ್ವದ ಸ್ಪಷ್ಟನೆ ನೀಡಿರುವ ನ್ಯಾಯಾಲಯವು, ಚುನಾವಣಾ ಆಯೋಗದ ನಿರ್ಧಾರಗಳು ಮತ್ತು ಪರಿಷ್ಕರಣೆಗಳು ಕೇವಲ ಚುನಾವಣಾ ಪ್ರಕ್ರಿಯೆಗೆ ಮಾತ್ರ ಸೀಮಿತವಾಗಿರುತ್ತವೆಯೇ ಹೊರತು, ಅವು ಯಾವುದೇ ಒಬ್ಬ ವ್ಯಕ್ತಿಯ ಪೌರತ್ವದ ಕುರಿತಾದ ಅಂತಿಮ ತೀರ್ಪಲ್ಲ ಎಂದು ತಿಳಿಸಿದೆ.

Category
ಕರಾವಳಿ ತರಂಗಿಣಿ