image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ದೆಹಲಿಯಲ್ಲಿ ಕಾಕ್ರೋಜ್ ಜನತಾ ಪಾರ್ಟಿ ಸಂಸತ್ ಚಲೋ: ಸಚಿವ ಜೆ.ಪಿ. ನಡ್ಡಾ ಜೊತೆ ಸಿ.ಜೆ.ಪಿ ನಾಯಕರ ಮಾತುಕತೆಗೆ ಮುನ್ನುಡಿ!

ದೆಹಲಿಯಲ್ಲಿ ಕಾಕ್ರೋಜ್ ಜನತಾ ಪಾರ್ಟಿ ಸಂಸತ್ ಚಲೋ: ಸಚಿವ ಜೆ.ಪಿ. ನಡ್ಡಾ ಜೊತೆ ಸಿ.ಜೆ.ಪಿ ನಾಯಕರ ಮಾತುಕತೆಗೆ ಮುನ್ನುಡಿ!

ನವದೆಹಲಿ : ದೇಶದಲ್ಲಿ ನಡೆಯುತ್ತಿರುವ ಪರೀಕ್ಷಾ ಅಕ್ರಮಗಳನ್ನು ಪ್ರಶ್ನಿಸಿ ಕಾಕ್ರೋಜ್ ಜನತಾ ಪಾರ್ಟಿ ನೇತೃತ್ವದಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಸೋಮವಾರ (ಜುಲೈ 20) ಬೃಹತ್ 'ಸಂಸತ್ ಚಲೋ' ಪ್ರತಿಭಟನಾ ರ‍್ಯಾಲಿ ನಡೆದಿದೆ. ಇಂದಿನಿಂದಲೇ ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭವಾಗುತ್ತಿರುವುದರಿಂದ, ಇದೇ ಸಂದರ್ಭವನ್ನು ಬಳಸಿಕೊಂಡು ಕಾಕ್ರೋಜ್ ಜನತಾ ಪಾರ್ಟಿಯ ಕಾರ್ಯಕರ್ತರು ಸಂಸತ್ ಭವನಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದರು ಎಂದು ತಿಳಿದುಬಂದಿದೆ. ಈ ಪ್ರತಿಭಟನೆಗೆ ದೆಹಲಿ ಪೊಲೀಸರ ಪೂರ್ವಾನುಮತಿ ಇರದ ಕಾರಣ, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಕೆಲವು ಕಡೆಗಳಲ್ಲಿ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ನಡೆಸಿದ್ದಾರೆ ಎಂದು ವರದಿಯಾಗಿದೆ. ಬ್ಯಾರಿಕೇಡ್‌ಗಳನ್ನು ದಾಟಿ ನುಗ್ಗಲು ಯತ್ನಿಸಿದ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಬಲಪ್ರಯೋಗ ಮಾಡಬೇಕಾಯಿತು.

ಆದರೆ, ರಾಜಧಾನಿಯಲ್ಲಿ ಪ್ರತಿಭಟನೆಯ ತೀವ್ರತೆ ಹೆಚ್ಚಾಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಕೇಂದ್ರ ಸರ್ಕಾರವು ಇದನ್ನು ಗಂಭೀರವಾಗಿ ಪರಿಗಣಿಸಿದೆ. ಪ್ರತಿಭಟನಾಕಾರರನ್ನು ಶಾಂತಗೊಳಿಸಲು ಮತ್ತು ಅವರ ಸಮಸ್ಯೆಗಳನ್ನು ಆಲಿಸಲು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ. ನಡ್ಡಾ ಅವರು ಕಾಕ್ರೋಜ್ ಜನತಾ ಪಾರ್ಟಿಯ ನಾಯಕರ ಜೊತೆ ಮಾತುಕತೆ ನಡೆಸಲು ಮುಂದಾಗಿದ್ದಾರೆ. ಈ ಮಹತ್ವದ ಬೆಳವಣಿಗೆಯ ಕುರಿತು ಕಾಕ್ರೋಜ್ ಜನತಾ ಪಾರ್ಟಿಯ ವಕ್ತಾರ ಸೌರವ್ ದಾಸ್ ಅವರು ತಮ್ಮ 'ಎಕ್ಸ್' ಪೋಸ್ಟ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. "ಸೋಮವಾರ ನಮ್ಮ ಪಕ್ಷದ ನಾಯಕರು ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಲಿದ್ದಾರೆ. ಸರ್ಕಾರವೇ ನಮ್ಮನ್ನು ಮಾತುಕತೆಗಾಗಿ ಸಂಪರ್ಕಿಸಿದೆ. ಆಶುತೋಷ್ ರಾಂಕಾ ನೇತೃತ್ವದ ನಮ್ಮ ನಿಯೋಗವು ಪ್ರಮುಖ ಬೇಡಿಕೆಗಳನ್ನು ಸಚಿವರಿಗೆ ಮನವರಿಕೆ ಮಾಡಿಕೊಡಲಿದ್ದು, ಈ ಬಾರಿ ಹೋರಾಟಕ್ಕೆ ದೊಡ್ಡ ಜಯ ಸಿಗಲಿದೆ" ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Category
ಕರಾವಳಿ ತರಂಗಿಣಿ