image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ಕಾವೇರಿ ನೀರು ಬಿಡುಗಡೆ: ತಮಿಳುನಾಡು ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ

ಕಾವೇರಿ ನೀರು ಬಿಡುಗಡೆ: ತಮಿಳುನಾಡು ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ

ನವದೆಹಲಿ : ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ಆದೇಶವನ್ನು ಜಾರಿಗೊಳಿಸಲು ಕರ್ನಾಟಕ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಕೋರಿ ತಮಿಳುನಾಡು ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸಮ್ಮತಿಸಿದೆ. ಈ ಅರ್ಜಿಯ ವಿಚಾರಣೆಯನ್ನು ಆಗಸ್ಟ್ 13ರಂದು ನಡೆಸಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠವು ತಿಳಿಸಿದೆ. ಕರ್ನಾಟಕವು ಜೂನ್ ಹಾಗೂ ಜುಲೈ ತಿಂಗಳಲ್ಲಿ ಒಟ್ಟು 41 ಟಿಎಂಸಿ ನೀರು ಹರಿಸಬೇಕಿತ್ತು. ಆದರೆ, ಈ ಎರಡು ತಿಂಗಳುಗಳಲ್ಲಿ ಕೇವಲ 4 ಟಿಎಂಸಿ ನೀರನ್ನು ಮಾತ್ರ ಹರಿಸಿದೆ. ನೆರೆ ರಾಜ್ಯವು ಪ್ರಮಾಣಾನುಗುಣವಾಗಿ ನೀರು ಬಿಡುಗಡೆ ಮಾಡಲು ವಿಫಲವಾಗಿದೆ ಎಂದು ತಮಿಳುನಾಡು ಸರ್ಕಾರ ತನ್ನ ಅರ್ಜಿಯಲ್ಲಿ ದೂರಿದೆ.

ಕರ್ನಾಟಕವು ನ್ಯಾಯಮಂಡಳಿಯ ತೀರ್ಪನ್ನು ಪಾಲಿಸುತ್ತಿಲ್ಲ ಹಾಗೂ ಇದರಿಂದಾಗಿ ಕಾವೇರಿ ಕಣಿವೆಯ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿರುವ ಡಿಎಂಕೆ ಪಕ್ಷವೂ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಕೂಡಲೇ ನೀರು ಬಿಡುಗಡೆ ಮಾಡಲು ಕರ್ನಾಟಕಕ್ಕೆ ಅಗತ್ಯ ನಿರ್ದೇಶನ ನೀಡಬೇಕು ಎಂದು ಅದು ಒತ್ತಾಯಿಸಿದೆ. ಈ ಹಿಂದೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯುಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಶಿಫಾರಸು ಮಾಡಿತ್ತು.

Category
ಕರಾವಳಿ ತರಂಗಿಣಿ