image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ಪಶ್ಚಿಮ ಬಂಗಾಳದ ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ ನಿಗೂಢ ಸಾವು

ಪಶ್ಚಿಮ ಬಂಗಾಳದ ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ ನಿಗೂಢ ಸಾವು

ಪಶ್ಚಿಮ ಬಂಗಾಳ : ಪಶ್ಚಿಮ ಬಂಗಾಳ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಘಟನೆಯೊಂದರಲ್ಲಿ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಹಾಗೂ ರಾಜ್ಯ ವಿಧಾನಸಭೆಯ ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ ಅವರು ಬಿರ್ಭುಮ್ ಜಿಲ್ಲೆಯ ರಾಂಪುರಹಾಟ್‌ನಲ್ಲಿರುವ ಟಿಎಂಸಿ ಕಚೇರಿಯಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಭಾನುವಾರ ಬೆಳಿಗ್ಗೆ ತಮ್ಮ ನಿವಾಸದ ಬಳಿ ಇರುವ ಪಕ್ಷದ ಕಚೇರಿಯಲ್ಲಿಯೇ ಅವರ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಪಶ್ಚಿಮ ಬಂಗಾಳ ಪೊಲೀಸರು ಪ್ರಾಥಮಿಕ ತನಿಖೆ ನಡೆಸಿ, ಪ್ರಕರಣವನ್ನು ಆತ್ಮಹತ್ಯೆ ಎಂದು ಶಂಕಿಸಿದ್ದಾರೆ. ಘಟನಾ ಸ್ಥಳದಲ್ಲಿ ಆತ್ಮಹತ್ಯೆ ಪತ್ರ (ಡೆತ್ ನೋಟ್) ವಶಪಡಿಸಿಕೊಳ್ಳಲಾಗಿದ್ದು, ಅದರಲ್ಲಿ "ನನ್ನ ಸಾವಿಗೆ ಯಾರೂ ಕಾರಣರಲ್ಲ" ಎಂದು ಬರೆದಿರುವುದಾಗಿ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಪ್ರಮುಖ ತನಿಖೆಯೊಂದರಲ್ಲಿ ಇವರ ಹೆಸರು ಕೇಳಿಬಂದಿದ್ದರಿಂದ ಉಂಟಾದ ತೀವ್ರ ಮಾನಸಿಕ ಒತ್ತಡವೇ ಈ ನಿರ್ಧಾರಕ್ಕೆ ಕಾರಣ ಎಂದು ಹೇಳಲಾಗಿದೆ.

ರಾಂಪುರಹಾಟ್‌ನ ಹಟ್ಟಲಪಾರದಲ್ಲಿ ವಾಸಿಸುತ್ತಿದ್ದ ಆಶಿಶ್ ಬ್ಯಾನರ್ಜಿ ಅವರು ಮಮತಾ ಬ್ಯಾನರ್ಜಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಆದರೆ, ಅವರು ಮನೆ ಬಿಟ್ಟು ಪಕ್ಷದ ಕಚೇರಿಗೆ ಬಂದು ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸದ್ಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಂದ ನಂತರವೇ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Category
ಕರಾವಳಿ ತರಂಗಿಣಿ