image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಸಂಭಾಲ್ ಹಿಂಸಾಚಾರದ ದಂಗೆಕೋರರ ಫೋಟೊ ಬೀದಿ ಬೀದಿಗಳಲ್ಲಿ ಪ್ರಕಟ-ಗಲಭೆಕೋರರಿಂದಲೇ ನಷ್ಟ ವಸೂಲಿ

ಸಂಭಾಲ್ ಹಿಂಸಾಚಾರದ ದಂಗೆಕೋರರ ಫೋಟೊ ಬೀದಿ ಬೀದಿಗಳಲ್ಲಿ ಪ್ರಕಟ-ಗಲಭೆಕೋರರಿಂದಲೇ ನಷ್ಟ ವಸೂಲಿ

ಲಖನೌ : ಉತ್ತರ ಪ್ರದೇಶದಲ್ಲಿ ಮಸೀದಿ ಸಮೀಕ್ಷೆಯನ್ನು ವಿರೋಧಿಸಿ ನಡೆದ ಸಂಭಾಲ್ ಹಿಂಸಾಚಾರದಲ್ಲಿ ಈವರೆಗೆ ಐವರು ಸಾವನ್ನಪ್ಪಿದ್ದು, ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಭಾರೀ ನಷ್ಟ ಉಂಟಾಗಿದೆ. ಇದೀಗ ನಷ್ಟ ಪರಿಹಾರವನ್ನು ಗಲಭೆಕೋರರಿಂದಲೇ ವಸೂಲು ಮಾಡಲು ಉತ್ತರ ಪ್ರದೇಶ ಸರ್ಕಾರ ಮುಂದಾಗಿದ್ದು, ಈ ನಿಟ್ಟಿನಲ್ಲಿ ಹಿಂಸಾಚಾರದ ವೇಳೆ ಕಲ್ಲು ತೂರಾಟ ನಡೆಸಿ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಉಂಟು ಮಾಡಿದ ಗಲಭೆಕೋರರ ಫೋಟೊಗಳನ್ನು ಬಹಿರಂಗವಾಗಿ ಪ್ರದರ್ಶಸಿಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗಲಭೆಕೋರರನ್ನು ಬಂಧಿಸಲು ನೆರವಾಗಿ, ಸೂಕ್ತ ಮಾಹಿತಿಯನ್ನು ನೀಡಿದವರಿಗೆ ಬಹುಮಾನವನ್ನೂ ಘೋಷಿಸಲಾಗುತ್ತದೆ'' ಎಂದು ಅಧಿಕೃತವಾಗಿ ತಿಳಿದು ಬಂದಿದೆ. 

ಈ ಹಿಂದೆ 2020ರಲ್ಲಿ ಕೂಡ ಸಿಎಎ ವಿರೋಧಿ ಪ್ರತಿಭಟನೆಯ ಸಮಯದಲ್ಲಿ ಉತ್ತರ ಪ್ರದೇಶ  ಸರ್ಕಾರ ಗಲಭೆಕೋರರ ಫೋಟೋಗಳನ್ನು ಸಾರ್ವಜನಿಕವಾಗಿ ಪ್ರದರ್ಶಿಸಿತ್ತು. ರಾಜ್ಯ ರಾಜಧಾನಿ ಸೇರಿದಂತೆ ಹಲವಾರು ಸ್ಥಳಗಳಲ್ಲಿ ದುಷ್ಕರ್ಮಿಗಳ ಪೋಸ್ಟರ್‌ಗಳನ್ನು ಯೋಗಿ ಆದಿತ್ಯನಾಥ್ ಸರ್ಕಾರವು ಪ್ರದರ್ಶಿಸಿತ್ತು. ಆದರೆ ನ್ಯಾಯಾಲಯದ ಆದೇಶದ ನಂತರ ಅವುಗಳನ್ನು ತೆಗೆದುಹಾಕಲಾಗಿತ್ತು. ಈಗ ಯಾವ ರೀತಿ ಈ ಕಾರ್ಯ ನಡೆಯುತ್ತದೆ ಎಂದು ಕಾದು ನೋಡಬೇಕಾಗಿದೆ.

Category
ಕರಾವಳಿ ತರಂಗಿಣಿ