image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮೆರವಣಿಗೆಯಲ್ಲಿ ಭಾರೀ ಅಗ್ನಿ ಅವಘಡ:30ಕ್ಕೂ ಹೆಚ್ಚು ಮಂದಿ ಸುಟ್ಟು ಗಂಭೀರ ಗಾಯ

ಮೆರವಣಿಗೆಯಲ್ಲಿ ಭಾರೀ ಅಗ್ನಿ ಅವಘಡ:30ಕ್ಕೂ ಹೆಚ್ಚು ಮಂದಿ ಸುಟ್ಟು ಗಂಭೀರ ಗಾಯ

ಖಾಂಡ್ವಾ : ಪಂಜಿನ ಮೆರವಣಿಗೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿ  30ಕ್ಕೂ ಹೆಚ್ಚು ಮಂದಿ ಸುಟ್ಟು ಗಂಭೀರ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಖಾಂಡ್ವಾದಲ್ಲಿ ಗುರುವಾರ ತಡರಾತ್ರಿ ಈ ಘಟನೆ ನಡೆದಿದ್ದು, 26/11 ರ ದಾಳಿಯ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಲು ಆಯೋಜಿಸಲಾದ ಪಂಜಿನ ಮೆರವಣಿಗೆಯಲ್ಲಿ ನೂರಾರು ಮಂದಿ ಭಾಗವಹಿಸಿದ್ದರು.

ಈ ವೇಳೆ ಪಂಜಿಗೆ ಬೆಂಕಿ ಹಚ್ಚುವಾಗ ಏಕಾಏಕಿ ಬೆಂಕಿ ಆವರಿಸಿಕೊಂಡಿದೆ. ಆಗ ಜನರು ಭಯದಿಂದ ಪ್ರಾಣರಕ್ಷಣೆಗಾಗಿ ಓಡಿದಾಗ ಕಾಲ್ತುಳಿತ ಉಂಟಾಗಿದೆ. ಖಾಂಡ್ವಾದಲ್ಲಿ ನಡೆದ ಅಗ್ನಿ ಅವಘಡದಲ್ಲಿ ಗಾಯಗೊಂಡಿರುವ ಜನರನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. 

ಬೆಂಕಿಗೆ ಆಹುತಿಯಾದವರಲ್ಲಿ ಮಹಿಳೆಯರು, ಮಕ್ಕಳು ಕೂಡ ಸೇರಿದ್ದಾರೆ. ಜನರ ಮುಖ, ಕೈ ಸುಟ್ಟು ಕರಕಲಾಗಿದೆ. 30 ಮಂದಿಯನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ 12 ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತುರ್ತು ಚಿಕಿತ್ಸಾ ಘಟಕಕ್ಕೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ. ಉಳಿದವರನ್ನು ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಮನೆಗೆ ಕಳುಹಿಸಲಾಗಿದೆ.

ಖಾಂಡ್ವಾದಲ್ಲಿ ನಡೆದ ಅಗ್ನಿ ಅವಘಡದಲ್ಲಿ ಘಟನೆಯ ವೇಳೆ ಸ್ಥಳದಲ್ಲಿದ್ದ ಪೊಲೀಸ್‌ ಸಿಬ್ಬಂದಿಯ ಸಮಯಪ್ರಜ್ಞೆಯಿಂದಾಗಿ ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ. ಪೊಲೀಸರು ಕೂಡಲೇ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಘಟನೆ ನಡೆದ ಕೂಡಲೇ ಅಕ್ಕಪಕ್ಕದಲ್ಲಿದ್ದ ಜನರು ಗಾಯಾಳುಗಳ ನೆರವಿಗೆ ಓಡಿ ಬಂದರು. ಮನೆಗಳಿಂದ ಬಕೆಟ್‌ಗಳಲ್ಲಿ ನೀರನ್ನು ತೆಗೆದುಕೊಂಡು ಬೆಂಕಿಗೆ ಸುರಿಯಲು ಪ್ರಾರಂಭಿಸಿದ್ದಾರೆ. ಗಾಯಾಳುಗಳ ಪೈಕಿ 30 ಮಂದಿಯಲ್ಲಿ 18 ಮಂದಿ ಮನೆಗೆ ಮರಳಿದ್ದಾರೆ. ಉಳಿದ 12 ಮಂದಿಗೆ ಜಿಲ್ಲಾ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಈ ಗಾಯಾಳುಗಳಲ್ಲಿ ಯಾರೂ ಅಪಾಯದಲ್ಲಿಲ್ಲ. ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Category
ಕರಾವಳಿ ತರಂಗಿಣಿ