ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿಯನ್ನು ವಿರೋಧಿಸಿ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್) ಸೇರಿದಂತೆ ವಿವಿಧ ಸಂಘಟನೆಗಳು ದೆಹಲಿಯ ವಿವಿಧ ಭಾಗಗಳಲ್ಲಿ ಸೋಮವಾರ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸುವ ಮೂಲಕ ಸಮಸ್ಯೆಯ ಬಗ್ಗೆ ಗಮನ ಸೆಳೆದವು.
ನೆರೆಯ ದೇಶದಲ್ಲಿ ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ಅಲ್ಲಿನ ಮತಾಂಧರು ನಡೆಸುತ್ತಿರುವ ದೌರ್ಬಲ್ಯ, ದಾಳಿಯ ವಿರುದ್ಧ 'ದೆಹಲಿಯ ನಾಗರಿಕ ಸಮಾಜ'ದ ನೇತೃತ್ವದಲ್ಲಿ ಬಾಂಗ್ಲಾದೇಶ ರಾಯಭಾರ ಕಚೇರಿಗೆ ಮೆರವಣಿಗೆ ನಡೆಸಲಾಯಿತು.
ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ದೆಹಲಿ ಘಟಕ ತಿಳಿಸಿದಂತೆ, ಪ್ರತಿಭಟನಾ ಮೆರವಣಿಗೆಯಲ್ಲಿ 200ಕ್ಕೂ ಹೆಚ್ಚು ಸಾಮಾಜಿಕ, ಸಾಂಸ್ಕೃತಿಕ ಮತ್ತು ಧಾರ್ಮಿಕ ಸಂಘಟನೆಗಳ ಪ್ರತಿನಿಧಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
"ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯದ ಬಗ್ಗೆ ಗಮನ ಸೆಳೆಯಲು, ದೆಹಲಿಯ ನಾಗರಿಕ ಸಮಾಜವು ಸೋಮವಾರ ರಾಷ್ಟ್ರ ರಾಜಧಾನಿಯ ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿತು. ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು" ಎಂದು ಪ್ರತಿಭಟನೆಯ ಸಂಘಟಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ.