ಚೆನ್ನೈ: ಫೆಂಗಲ್ ಚಂಡಮಾರುತದಿಂದ ಚೇತರಿಸಿಕೊಳ್ಳುವ ಮುನ್ನವೇ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮುಂದಿನ 24 ಗಂಟೆಗಳಲ್ಲಿ ಇದು ಇನ್ನಷ್ಟು ತೀವ್ರವಾಗಲಿದೆ. ಇದರಿಂದ ತಮಿಳುನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.
ಆಗ್ನೇಯ ಬಂಗಾಳ ಕೊಲ್ಲಿ ಮತ್ತು ಸಮಭಾಜಕದ ಬಳಿ ಹಿಂದೂ ಮಹಾಸಾಗರದ ಮೇಲ್ಮೈ ಬಳಿ ಕಡಿಮೆ ಒತ್ತಡ ಪ್ರದೇಶ ನಿರ್ಮಾಣವಾಗಲಿದೆ. ಪರಿಣಾಮ ಮುಂದಿನ ನಾಲ್ಕು ದಿನಗಳ ಕಾಲ ತಮಿಳುನಾಡಿನಲ್ಲಿ ಭಾರೀ ಮಳೆಯಾಗಲಿದೆ. ಗುರುವಾರ ಚೆನ್ನೈನಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದ್ದು, ಯೆಲ್ಲೋ ಆಲರ್ಟ್ ಘೋಷಿಸಲಾಗಿದೆ ಎಂದು ಐಎಂಡಿ ತಿಳಿಸಿದೆ.
ತಿರುವಳ್ಳೂರು, ಕಾಂಚೀಪುರಂ, ಕಲ್ಲಕುರಿಚಿ, ಅರಿಯಲೂರ್, ಪೆರಂಬಲೂರ್, ತಂಜಾವೂರು, ತಿರುವರೂರು, ಮೈಲಾಡುತುರೈ, ನಾಗಪಟ್ಟಣಂ, ಪುದುಕ್ಕೊಟ್ಟೈ, ಶಿವಗಂಗಾ ಮತ್ತು ರಾಮನಾಥಪುರಂ ಸೇರಿದಂತೆ ಹಲವು ಜಿಲ್ಲೆಗಳು ತೀವ್ರ ಮಳೆಯಾಗುವ ನಿರೀಕ್ಷೆಯಿದೆ. ಈ ನಡುವೆ ಚೆಂಗಲ್ಪಟ್ಟು, ವಿಲ್ಲುಪುರಂ ಮತ್ತು ಕಡಲೂರು ಜಿಲ್ಲೆಗಳಿಗೆ ಡಿ.12 ರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಪ್ರಾದೇಶಿಕ ಹವಾಮಾನ ಕೇಂದ್ರ (ಆರ್ಎಂಸಿ) ಕೂಡ ಚೆನ್ನೈ ಮತ್ತು ಸುತ್ತಮುತ್ತ ಜಿಲ್ಲೆಗಳಲ್ಲಿ ಡಿ. 12ರಿಂದ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಗಾಳಿಯ ವೇಗ ಹೆಚ್ಚಿದ್ದು, ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.
ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಗಾಳಿಯು ಗಂಟೆಗೆ 35-45 ಕಿಲೋ ಮೀಟರ್ ವೇಗದಲ್ಲಿ ಬೀಸುವ ನಿರೀಕ್ಷೆಯಿದೆ