image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಪಾಕಿಸ್ಥಾನದಲ್ಲಿ ಮುಂದುವರಿದ ಆಂತರಿಕ ಕಲಹ

ಪಾಕಿಸ್ಥಾನದಲ್ಲಿ ಮುಂದುವರಿದ ಆಂತರಿಕ ಕಲಹ

ಪಾಕಿಸ್ಥಾನ :ಪಾಕಿಸ್ಥಾನದ ಖೈಬರ್ ಕಣಿವೆಯ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ. 11 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೌಜರ್ ಜಿಲ್ಲೆಯ ಮುಲ್ಲಾ ಸೈದ್ ಬಂದಾ ಪ್ರದೇಶದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಭಯೋತ್ಪಾದಕರೊಂದಿಗಿನ ಘರ್ಷಣೆಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಮತ್ತು ಮೇಜರ್ ಶ್ರೇಣಿಯ ಅಧಿಕಾರಿ ಸೇರಿದಂತೆ 11 ಮಂದಿ ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನದ ಪೊಲೀಸರು ತಿಳಿಸಿದ್ದಾರೆ. ಉಗ್ರರ ನಡುವೆಯೂ ಸಾವು ನೋವುಗಳು ಸಂಭವಿಸಿವೆ. ಆದರೆ ತಕ್ಷಣಕ್ಕೆ ನಿಖರವಾದ ಸಾವಿನ ಸಂಖ್ಯೆ ತಿಳಿದಿಲ್ಲ ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.

ಪಾಕ್​ ಸೇನೆ ನಡೆಸಿದ ಮೂರು ಪ್ರತ್ಯೇಕ ಕಾರ್ಯಾಚರಣೆಗಳ ವೇಳೆ ಪಾಕಿಸ್ತಾನಿ ಸೇನಾಧಿಕಾರಿಯೊಬ್ಬರು ಸಾವನ್ನಪ್ಪಿದ್ದು, 13 ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪಾಕಿಸ್ತಾನಿ ಮಿಲಿಟರಿಯ ಮಾಧ್ಯಮ ವಿಭಾಗ ಮಾಹಿತಿ ನೀಡಿತ್ತು ಪಾಕ್​ ನ ಗೃಹ ಇಲಾಖೆ ಇತ್ತೀಚೆಗೆ ನೀಡಿದ ಅಂಕಿ - ಅಂಶಗಳ ಪ್ರಕಾರ, ಕಳೆದ 10 ತಿಂಗಳಲ್ಲಿ ವರದಿಯಾದ 1,566 ಭಯೋತ್ಪಾದನಾ ಘಟನೆಗಳಲ್ಲಿ 948 ಘಟನೆಗಳು ಖೈಬರ್ ಪಖ್ತುಂಖ್ವಾದಲ್ಲಿ ನಡೆದಿವೆ. ಇದರ ಪರಿಣಾಮ 583 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ.

Category
ಕರಾವಳಿ ತರಂಗಿಣಿ