image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕ್ರಿಸ್​​ಮಸ್​​ ವೇಳೆ, ಜರ್ಮನಿ ಮಾರುಕಟ್ಟೆಯಲ್ಲಿ ನಡೆದ ದಾಳಿ ಹಿನ್ನೆಲೆಯಲ್ಲಿ ನ್ಯೂಯಾರ್ಕ್​ನಲ್ಲಿ ಭಾರಿ ಬಿಗಿ ಭದ್ರತೆ

ಕ್ರಿಸ್​​ಮಸ್​​ ವೇಳೆ, ಜರ್ಮನಿ ಮಾರುಕಟ್ಟೆಯಲ್ಲಿ ನಡೆದ ದಾಳಿ ಹಿನ್ನೆಲೆಯಲ್ಲಿ ನ್ಯೂಯಾರ್ಕ್​ನಲ್ಲಿ ಭಾರಿ ಬಿಗಿ ಭದ್ರತೆ

ಅಮೆರಿಕ: ಹೊಸ ವರ್ಷದ ರಜಾದಿನ ಹಾಗೂ ಹೊಸ ವರ್ಷದ ಆಚರಣೆ ಸಮಯದಲ್ಲಿ ಸಾರ್ವಜನಿಕರಿಗೆ ಸೂಕ್ತ ಭದ್ರತೆ ನೀಡಲು ನ್ಯೂಯಾರ್ಕ್ ಗವರ್ನರ್ ಕ್ಯಾಥಿ ಹೊಚುಲ್, ರಾಜ್ಯಾದ್ಯಂತ ಕಟ್ಟೆಚ್ಚರ ಘೋಷಿಸಿದ್ದಾರೆ. ಹೆಚ್ಚಿನ ಸುರಕ್ಷತೆ ಒದಗಿಸುವಂತೆ ಪೊಲೀಸರಿಗೆ ಸೂಚಿಸಿದ್ದಾರೆ.

ರಾಜ್ಯ ಪೊಲೀಸ್, ನ್ಯೂಯಾರ್ಕ್ ನ್ಯಾಷನಲ್ ಗಾರ್ಡ್ ಮತ್ತು ಇತರ ಏಜೆನ್ಸಿಗಳ ಸಹಯೋಗದೊಂದಿಗೆ ಭದ್ರತಾ ಸಿಬ್ಬಂದಿ ಹೆಚ್ಚಿಸಲಾಗಿದೆ. ವಿಮಾನ ನಿಲ್ದಾಣಗಳು, ಸೇತುವೆಗಳು, ಸುರಂಗಗಳು ಮತ್ತು ಸಾರ್ವಜನಿಕ ಸಾರಿಗೆ ವ್ಯವಸ್ಥೆಗಳಲ್ಲಿ ಹೆಚ್ಚಿನ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

ಹೊಸ ವರ್ಷವನ್ನು ಬರ ಮಾಡಿಕೊಳ್ಳಲು ನ್ಯೂಯಾರ್ಕ್​ ನಗರ ಸನ್ನದ್ಧವಾಗಿದ್ದು, ಮಹಾನಗರದ ನಿವಾಸಿಗಳು ಮತ್ತು ಸಂದರ್ಶಕರು ಸುರಕ್ಷಿತವಾಗಿ ಮತ್ತು ಶಾಂತಿಯುತವಾಗಿ ಆಚರಿಸಲು ಎಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಿರ್ದೇಶನ ನೀಡಿದ್ದೇನೆ ಎಂದು ಗವರ್ನರ್​ ಹೊಚುಲ್ ಸೋಮವಾರದ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

 

Category
ಕರಾವಳಿ ತರಂಗಿಣಿ