image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಟಿಬೆಟ್​ನಲ್ಲಿ ಭಾರಿ ಪ್ರಮಾಣದ ಭೂಕಂಪ

ಟಿಬೆಟ್​ನಲ್ಲಿ ಭಾರಿ ಪ್ರಮಾಣದ ಭೂಕಂಪ

ನವದೆಹಲಿ: ಟಿಬೆಟ್​​ನಲ್ಲಿ ಸಂಭವಿಸಿದ ಪ್ರಬಲ ಭೂಕಂಪನದಲ್ಲಿ ಮೃತಪಟ್ಟವರ ಸಂಖ್ಯೆ 95ಕ್ಕೆ ಏರಿದೆ. ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮಧ್ನಾಹ್ನದ ವೇಳೆಗೆ 95 ಜನ ಮೃತಪಟ್ಟಿರುವುದು ದೃಢಪಟ್ಟಿದೆ ಮತ್ತು 130 ಜನರು ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ. ಇಂದು ಬೆಳಗ್ಗೆ ಭೂಮಿ ನಡುಗಿದ್ದು, ರಿಕ್ಟರ್‌ ಮಾಪಕದಲ್ಲಿ 7.1ರಷ್ಟು ತೀವ್ರತೆ ದಾಖಲಾಗಿದೆ.

62 ಜನ ವಾಸವಿರುವ ಟಿಬೆಟ್​, ಮೌಂಟ್​ ಎವರೆಸ್ಟ್​ನ ಚೀನಾ ಬದಿಯಲ್ಲಿದೆ. ಈ ಪರ್ವತ ಶ್ರೇಣಿಯಲ್ಲಿ ಭೂಕಂಪನ ಸಂಭವಿಸುವುದು ಸಾಮಾನ್ಯ. ಆದರೆ ಇಲ್ಲಿನ 200 ಕಿಮೀ ವ್ಯಾಪ್ತಿಯಲ್ಲಿ ಕಳೆದ ಐದು ವರ್ಷಗಳಲ್ಲಿ ಇಂದು ಸಂಭವಿಸಿದ ಕಂಪನ ಅತಿ ಪ್ರಬಲವಾಗಿದೆ ಎಂದು ವರದಿಯಾಗಿದೆ.ಪ್ರಬಲ ಭೂಕಂಪನ ನೇಪಾಳದಲ್ಲೂ ಭೀತಿ ಉಂಟು ಮಾಡಿದೆ. ನೇಪಾಳದ ರಾಜಧಾನಿ ಕಠ್ಮಂಡುನಲ್ಲಿ ಭೂಮಿ ಕಂಪಿಸುತ್ತಿದ್ದಂತೆ ಜನರು ಮನೆಯಿಂದ ಹೊರಗೆ ಓಡಿಬಂದಿದ್ದರು.

ನೇಪಾಳದ ಲಾಬ್ಚೆ ಎಂಬಲ್ಲಿಂದ ಸುಮಾರು 93 ಕಿಲೋ ಮೀಟರ್‌ ದೂರದ ಚೀನಾದ ಟಿಬೆಟ್‌ನಲ್ಲಿ ವ್ಯಾಪಿಸಿರುವ ಪರ್ವತ ಗಡಿ ಪ್ರದೇಶಗಳಲ್ಲಿ ಭೂಕಂಪನದ ಕೇಂದ್ರ ಬಿಂದುವನ್ನು ಗುರುತಿಸಲಾಗಿದೆ ಎಂದು ಯುಎಸ್ ಜಿಯಾಲಾಜಿಕಲ್ ಸರ್ವೇ ಮಾಹಿತಿ ನೀಡಿದೆ. ಇಲ್ಲಿಂದ ಸುಮಾರು 200 ಕಿಲೋ ಮೀಟರ್ ದೂರದ ದೇಶದ ಆಗ್ನೇಯ ದಿಕ್ಕಿನಲ್ಲಿರುವ ಕಠ್ಮಂಡುವಿನಲ್ಲಿ ಕಟ್ಟಡಗಳು ನಡುಗಿವೆ. ಭೂಮಿಯ 10 ಕಿಲೋ ಮೀಟರ್‌ ಆಳದಲ್ಲಿ ಕಂಪನ ಉಂಟಾಗಿದೆ ಎಂದು ತಿಳಿದು ಬಂದಿದೆ.

Category
ಕರಾವಳಿ ತರಂಗಿಣಿ