ನವದೆಹಲಿ: ವಿಧಾನಸಭಾ ಚುನಾವಣೆಯ ಹಿನ್ನೆಲೆ ನವದೆಹಲಿ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದಾಗ ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.
ಅರವಿಂದ್ ಕೇಜ್ರಿವಾಲ್ಗೆ ಕೆಲವರು ಕಪ್ಪು ಬಾವುಟ ತೋರಿಸಿ, ಅವರ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಈ ವೇಳೆ ಅರವಿಂದ್ ಕೇಜ್ರಿವಾಲ್ ಅವರ ಚಾಲಕ ಕಾರನ್ನು ವೇಗವನ್ನು ಚಲಾಯಿಸಿದ್ದರಿಂದ ಇಬ್ಬರು ಗಾಯಗೊಂಡಿದ್ದಾರೆ. ಈ ಸಂಬಂಧ ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷ ದ ಕಾರ್ಯಕರ್ತರು ನಡುವೆ ವಾಗ್ವಾದ ನಡೆದಿದೆ.
ಅರವಿಂದ್ ಕೇಜ್ರಿವಾಲ್ ಕಾರು ಇಬ್ಬರು ಯುವಕರಿಗೆ ಡಿಕ್ಕಿ ಹೊಡೆದಿದೆ. ಸೋಲಿನ ಭಯದಿಂದ ಆಮ್ ಆದ್ಮಿ ಪಕ್ಷದ ನಾಯಕರು ಜನರ ಜೀವದ ಮೌಲ್ಯವನ್ನೇ ಮರೆತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಪ್ರವೇಶ್ ವರ್ಮಾ ಆರೋಪಿಸಿದ್ದಾರೆ. ಇಬ್ಬರು ಗಾಯಾಳುಗಳನ್ನು ಲೇಡಿ ಹಾರ್ಡಿಂಜ್ ಆಸ್ಪತ್ರೆಗೆ ರವಾಸಿಸಲಾಗಿದೆ. ಪ್ರವೇಶ್ ವರ್ಮಾ ಲೇಡಿ ಹಾರ್ಡಿಂಜ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.