image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಗಣ ರಾಜ್ಯೋತ್ಸವದಂದು ಜಮ್ಮು ಕಾಶ್ಮೀರದಲ್ಲಿ ಬಾಂಬ್​ ಬೆದರಿಕೆ ಸಂದೇಶ

ಗಣ ರಾಜ್ಯೋತ್ಸವದಂದು ಜಮ್ಮು ಕಾಶ್ಮೀರದಲ್ಲಿ ಬಾಂಬ್​ ಬೆದರಿಕೆ ಸಂದೇಶ

ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ ಗಣರಾಜ್ಯೋತ್ಸವದ ಸಂಭ್ರಮ ಮನೆಮಾಡಿದೆ. ಲೆಫ್ಟಿನೆಂಟ್​ ಗವರ್ನರ್​ ಮನೋಜ್​ ಸಿನ್ಹಾ, ಸಿಎಂ ಒಮರ್​ ಅಬ್ದುಲ್ಲಾ ಅವರು ಭಾಗವಹಿಸಬೇಕಿದ್ದ ಧ್ವಜಾರೋಹಣ ಕಾರ್ಯಕ್ರಮಕ್ಕೆ ಹುಸಿ ಬಾಂಬ್​ ಬೆದರಿಕೆ ಹಾಕಲಾಗಿತ್ತು. ಈ ಹಿನ್ನೆಲೆ ಭದ್ರತಾ ಪಡೆಗಳು ತೀವ್ರ ತಪಾಸಣೆ ನಡೆಸಿವೆ.

ಕೇಂದ್ರಾಡಳಿತ ಪ್ರದೇಶದ ಎಂಎ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ರಾಷ್ಟ್ರಧ್ವಜ ಹಾರಿಸಿ ಗೌರವ ವಂದನೆ ಸ್ವೀಕರಿಸಿದರು. ಇದಕ್ಕೂ ಮೊದಲು ಕ್ರೀಡಾಂಗಣದಲ್ಲಿ ಬಾಂಬ್​ ಇಟ್ಟಿರುವ ಬೆದರಿಕೆ ಹಾಕಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಯಕ್ರಮ ಪ್ರಾರಂಭವಾಗುವ ಮೊದಲು ಬಾಂಬ್ ಬೆದರಿಕೆಯ ಇ-ಮೇಲ್​ ಅನ್ನು ಶನಿವಾರ ರಾತ್ರಿ 'ಡೈಸ್ ಲಿಶ್' ಎಂಬ ಬಳಕೆದಾರನ ಹೆಸರಿನಲ್ಲಿ ಉನ್ನತ ಶಿಕ್ಷಣ ಕಾರ್ಯದರ್ಶಿ ಮತ್ತು ಉನ್ನತ ಶಿಕ್ಷಣ ನಿರ್ದೇಶಕರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕೃತ ಇ-ಮೇಲ್ ಖಾತೆಗಳಿಗೆ ಕಳುಹಿಸಲಾಗಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Category
ಕರಾವಳಿ ತರಂಗಿಣಿ