image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಪ್ರಯಾಗ್‌ರಾಜ್‌ ತ್ರಿವೇಣಿ ಸಂಗಮದಲ್ಲಿ ಕಾಲ್ತುಳಿತ; 17 ಮಂದಿ ಸಾವು ಶಂಕೆ

ಪ್ರಯಾಗ್‌ರಾಜ್‌ ತ್ರಿವೇಣಿ ಸಂಗಮದಲ್ಲಿ ಕಾಲ್ತುಳಿತ; 17 ಮಂದಿ ಸಾವು ಶಂಕೆ

ಪ್ರಯಾಗ್​ರಾಜ್ : ಪವಿತ್ರ ಮಹಾಕುಂಭ ಮೇಳ ನಡೆಯುತ್ತಿರುವ ಇಲ್ಲಿನ ತ್ರಿವೇಣಿ ಸಂಗಮದ ಸಮೀಪ ತಡರಾತ್ರಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 17 ಮಂದಿ ಭಕ್ತರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಇದೇ ವೇಳೆ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಕೆಲವರು ನಾಪತ್ತೆಯಾಗಿದೆ ಎಂದು ಇತ್ತೀಚಿನ ವರದಿಗಳು ತಿಳಿಸಿವೆ.

ಕಾಲ್ತುಳಿತದ ವೇಳೆ ನೂಕುನುಗ್ಗಲು ಉಂಟಾದಾಗ ಸ್ನಾನಕ್ಕೆ ಸೇರಿದ್ದ ಭಕ್ತರು ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ. ಸ್ಥಳದಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಶೂ, ಚಪ್ಪಲಿ, ಬಟ್ಟೆಗಳು ಘಟನೆಯ ಗಂಭೀರತೆಯನ್ನು ಸೂಚಿಸುತ್ತಿವೆ. ಈ ಹಿನ್ನೆಲೆಯಲ್ಲಿ ಕೆಲವು ಅಖಾರಾಗಳು ಇದೀಗ ಅಮೃತ ಸ್ನಾನವನ್ನು ತಾತ್ಕಾಲಿಕವಾಗಿ ರದ್ದು ಮಾಡಿದ್ದಾರೆ.

ಪ್ರಯಾಗ್‌ರಾಜ್​ನಲ್ಲಿ ಈಗಾಗಲೇ ಮಕರ ಸಂಕ್ರಾಂತಿ, ಪೌರ್ಣಿಮೆ ಸೇರಿದಂತೆ ಮಹತ್ವದ ದಿನಗಳಂದು ಕೋಟ್ಯಂತರ ಭಕ್ತರು ಪವಿತ್ರ ಸ್ನಾನ ಮಾಡಿದ್ದಾರೆ. ಇಂದು ಮೌನಿ ಅಮಾವಾಸ್ಯೆಯಾಗಿದ್ದು ಮತ್ತೊಂದು ಪವಿತ್ರ ಸ್ನಾನಕ್ಕೆ ಪ್ರಮುಖವಾದ ದಿನ. ಈ ದಿನ 10 ಕೋಟಿ ಭಕ್ತರು ತ್ರಿವೇಣಿ ಸಂಗಮದಲ್ಲಿ ಸ್ನಾನ ನಡೆಸುವ ಸಾಧ್ಯತೆ ಇದೆ ಎಂದು ಉತ್ತರ ಪ್ರದೇಶ ಸರ್ಕಾರ ಅಂದಾಜಿಸಿತ್ತು. ಈ ನಿಟ್ಟಿನಲ್ಲಿ ಹೆಚ್ವಿನ ಭದ್ರತಾ ಕ್ರಮಗಳನ್ನೂ ತೆಗೆದುಕೊಳ್ಳಲಾಗಿತ್ತು.

Category
ಕರಾವಳಿ ತರಂಗಿಣಿ