ಬೆಂಗಳೂರು: ಬಿಜೆಪಿ ಸರ್ಕಾರದಲ್ಲಿ ಪರಿಷ್ಕರಣೆಗೊಂಡಿದ್ದ ಪಠ್ಯಪುಸ್ತಕವನ್ನು ಆಡಳಿತಾರೂಢ ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ಪುನರ್ ಪರಿಷ್ಕರಣೆ ಮಾಡಿದೆ. ೨೦೨೪-೨೫ ಸಾಲಿನ ಪಠ್ಯಪುಸ್ತಕವನ್ನು ಡಾ.ಮಂಜುನಾಥ್ ಹೆಗಡೆ ನೇತೃತ್ವದ ಸಮಿತಿ ಪರಿಷ್ಕರಣೆ ಮಾಡಿದ್ದು, ಶಾಲಾ ಶಿಕ್ಷಣ ಇಲಾಖೆ ಈ ಸಂಬAಧ ಪತ್ರಿಕಾ ಪ್ರಕಟಣೆ ಮೂಲಕ ಪಠ್ಯ ಪರಿಷ್ಕರಣೆ ಮಾಹಿತಿ ನೀಡಿದೆ. ೨೦೨೩-೨೦೨೪ ಸಾಲಿನಲ್ಲೂ ಹಲವು ತಿದ್ದುಪಡಿ ಮಾಡಿತ್ತು. ಇದರಂತೆ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಲ್ಲೂ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು-೨೦೦೫ರ ಮಾರ್ಗಸೂಚಿಯಂತೆ ರಾಜ್ಯ ಪಠ್ಯಕ್ರಮದಲ್ಲಿ ಬದಲಾವಣೆ ಮಾಡಿದೆ. ಕೆಲವು ಪಾಠಗಳಿಗೆ ಕೊಕ್ ನೀಡಿ ಹಲವು ಪಾಠಗಳನ್ನು ಹೊಸದಾಗಿ ಸೇರ್ಪಡೆ ಮಾಡಲಾಗಿದೆ.