image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಪ್ರಾರ್ಥನಾ ಸ್ಥಳಗಳ ಕಾಯ್ದೆ ಕುರಿತಾದ ಅರ್ಜಿಗಳ ವಿಚಾರಣೆಯನ್ನು ಮುಂದೂಡಿದ ಸುಪ್ರೀಂ

ಪ್ರಾರ್ಥನಾ ಸ್ಥಳಗಳ ಕಾಯ್ದೆ ಕುರಿತಾದ ಅರ್ಜಿಗಳ ವಿಚಾರಣೆಯನ್ನು ಮುಂದೂಡಿದ ಸುಪ್ರೀಂ

ನವದೆಹಲಿ: ಪ್ರಾರ್ಥನಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯ್ದೆ 1991ಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಏಪ್ರಿಲ್ ಮೊದಲ ವಾರಕ್ಕೆ ಮುಂದೂಡಿದೆ. ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ನ್ಯಾಯಪೀಠವು ಈ ವಿಷಯವನ್ನು ಮೂವರು ನ್ಯಾಯಾಧೀಶರ ಪೀಠವು ವಿಚಾರಣೆ ನಡೆಸಲಿದೆ ಎಂದು ತಿಳಿಸಿತು.

ಆಗಸ್ಟ್ 15, 1947 ರಂದು ಅಸ್ತಿತ್ವದಲ್ಲಿದ್ದ ಸ್ಥಳದ ಧಾರ್ಮಿಕ ಸ್ವರೂಪವನ್ನು ಕಾಪಾಡಿಕೊಳ್ಳುವುದನ್ನು ಕಡ್ಡಾಯಗೊಳಿಸುವ ಪೂಜಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯ್ದೆ, 1991 ರ ಸಿಂಧುತ್ವಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಹಲವಾರು ಹೊಸ ಅರ್ಜಿಗಳು ಸಲ್ಲಿಕೆಯಾಗಿರುವ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತು.

ಕಕ್ಷಿದಾರರೊಬ್ಬರ ಪರವಾಗಿ ಹಾಜರಾದ ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಇವತ್ತಿನ ದಿನದಂದು ಹೊಸ ಅರ್ಜಿಯೊಂದನ್ನು ಸಲ್ಲಿಸಿ ಅದರ ಬಗ್ಗೆ ವಿಚಾರಣೆ ನಡೆಸಬೇಕೆಂದು ಕೋರಿದಾಗ, "ನಾವು ಇಂದು ಅದನ್ನು ವಿಚಾರಣೆ ನಡೆಸಲು ಸಾಧ್ಯವಾಗದಿರಬಹುದು" ಎಂದು ಸಿಜೆಐ ಹೇಳಿದರು. ದಿನದ ಕಲಾಪದ ಆರಂಭದಲ್ಲಿ ಹಿರಿಯ ವಕೀಲೆ ಜೈಸಿಂಗ್ ಈ ವಿಷಯವನ್ನು ಪ್ರಸ್ತಾಪಿಸಿದರು.

"ಅರ್ಜಿಗಳನ್ನು ಸಲ್ಲಿಸಲು ಒಂದು ಮಿತಿ ಇದೆ. ಅನೇಕ ಮಧ್ಯಂತರ ಅರ್ಜಿಗಳು ಸಲ್ಲಿಕೆಯಾಗಿವೆ. ನಾವು ಅವುಗಳೆಲ್ಲವನ್ನೂ ವಿಚಾರಣೆ ನಡೆಸಲು ಸಾಧ್ಯವಾಗದಿರಬಹುದು" ಎಂದು ಹೇಳಿದ ಸಿಜೆಐ, ಮಾರ್ಚ್​ನಲ್ಲಿ ವಿಚಾರಣೆಯ ದಿನಾಂಕ ನಿಗದಿಪಡಿಸಬಹುದು ಎಂದರು.

Category
ಕರಾವಳಿ ತರಂಗಿಣಿ