image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಪಾಕಿಸ್ತಾನವು ಜಾಗತಿಕ ಭಯೋತ್ಪಾದನೆಯ ಕೇಂದ್ರಬಿಂದುವಾಗಿದೆ - ವಿಶ್ವಸಂಸ್ಥೆಯಲ್ಲಿ ಭಾರತದ ಹೇಳಿಕೆ

ಪಾಕಿಸ್ತಾನವು ಜಾಗತಿಕ ಭಯೋತ್ಪಾದನೆಯ ಕೇಂದ್ರಬಿಂದುವಾಗಿದೆ - ವಿಶ್ವಸಂಸ್ಥೆಯಲ್ಲಿ ಭಾರತದ ಹೇಳಿಕೆ

ವಿಶ್ವಸಂಸ್ಥೆ: ಸ್ವತಃ ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದುವಾಗಿರುವ ಪಾಕಿಸ್ತಾನ, ತಾನು ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವುದಾಗಿ ಹೇಳಿಕೊಳ್ಳುತ್ತಿರುವುದು ವಿಪರ್ಯಾಸ ಎಂದು ಭಾರತ ಹೇಳಿದೆ.

ಪಾಕಿಸ್ತಾನವು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದುವಾಗಿದೆ. ಯುಎನ್ ಪಟ್ಟಿ ಮಾಡಿದ 20 ಕ್ಕೂ ಹೆಚ್ಚು ಭಯೋತ್ಪಾದಕ ಸಂಘಟನೆಗಳಿಗೆ ಆಶ್ರಯ ನೀಡುತ್ತಿದೆ ಮತ್ತು ಗಡಿಯಾಚೆಗಿನ ಭಯೋತ್ಪಾದನೆಗೆ ಸರ್ಕಾರಿ ಬೆಂಬಲ ನೀಡುತ್ತಿದೆ ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿ ಪರ್ವತನೇನಿ ಹರೀಶ್ ಮಂಗಳವಾರ ಭದ್ರತಾ ಮಂಡಳಿ ಸಭೆಯಲ್ಲಿ ಹೇಳಿದರು. "ಹೀಗಿರುವಾಗ ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವುದಾಗಿ ಪಾಕಿಸ್ತಾನವು ತನ್ನ ಬೆನ್ನು ತಾನೇ ತಟ್ಟಿಕೊಳ್ಳುವುದು ಮಹಾನ್ ವಿಪರ್ಯಾಸ" ಎಂದು ಅವರು ಹೇಳಿದರು.

ಜೈಶ್ ಎ ಮೊಹಮ್ಮದ್ (ಜೆಎಂ) ಮತ್ತು ಹರ್ಕತ್ ಉಲ್ ಮುಜಾಹಿದೀನ್ (ಎಚ್​ಯುಎಂ) ನಂತಹ ಭಯೋತ್ಪಾದಕ ಸಂಘಟನೆಗಳ ಮೂಲಕ ಈ ದೇಶವು ನಡೆಸುತ್ತಿರುವ ಭಯೋತ್ಪಾದಕ ಕೃತ್ಯಗಳಿಗೆ ಭಾರತ ಬಲಿಪಶುವಾಗಿದೆ ಎಂದು ಅವರು ಆರೋಪಿಸಿದರು.

ಕಾಶ್ಮೀರ ವಿವಾದವನ್ನು ಕೆದಕಿದ ಪಾಕಿಸ್ತಾನದ ಉಪ ಪ್ರಧಾನಿ ಇಶಾಕ್ ದಾರ್ ಅವರಿಗೆ ತಿರುಗೇಟು ನೀಡಿದ ಹರೀಶ್, "ವಾಸ್ತವವಾಗಿ, ಪಾಕಿಸ್ತಾನವೇ ಜಮ್ಮು ಮತ್ತು ಕಾಶ್ಮೀರದ ಕೆಲ ಭಾಗಗಳನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿದೆ" ಎಂದು ಹೇಳಿದರು.

Category
ಕರಾವಳಿ ತರಂಗಿಣಿ