image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕೆಲವು ರಾಜಕೀಯ ಪಕ್ಷಗಳು ಭಾಷೆಯ ಆಧಾರದಲ್ಲಿ ಇನ್ನೂ ದೇಶವನ್ನು ಇಬ್ಭಾಗಿಸಲು ಬಯಸುತ್ತಿವೆ -ಅಣ್ಣಾ ಮಲೈ

ಕೆಲವು ರಾಜಕೀಯ ಪಕ್ಷಗಳು ಭಾಷೆಯ ಆಧಾರದಲ್ಲಿ ಇನ್ನೂ ದೇಶವನ್ನು ಇಬ್ಭಾಗಿಸಲು ಬಯಸುತ್ತಿವೆ -ಅಣ್ಣಾ ಮಲೈ

ಚೆನ್ನೈ : "ಕೆಲವು ರಾಜಕೀಯ ಪಕ್ಷಗಳು ಭಾಷೆಯ ಆಧಾರದಲ್ಲಿ ಇನ್ನೂ ದೇಶವನ್ನು ಇಬ್ಭಾಗಿಸಲು ಬಯಸುತ್ತಿವೆ" ಎಂದು ತಮಿಳುನಾಡು ಭಾರತೀಯ ಜನತಾ ಪಕ್ಷ (ಬಿಜೆಪಿ)ದ ಅಧ್ಯಕ್ಷ ಅಣ್ಣಾಮಲೈ ಟೀಕಿಸಿದ್ದಾರೆ. "ಮಾತೃಭಾಷೆ ಎಲ್ಲರಿಗೂ ಮುಖ್ಯ. 10 ಭಾಷೆಗಳನ್ನು ತಿಳಿದುಕೊಂಡ ಬಳಿಕವೇ ತಮಿಳಿನ ಮಹಾಕವಿ ಭಾರತಿ ಅವರು ತಮಿಳನ್ನು ಶ್ರೇಷ್ಠ ಭಾಷೆ ಎಂದು ಕರೆದರು. ಹಾಗಾಗಿ, ಜನರು ಹೆಚ್ಚು ಭಾಷೆಗಳನ್ನು ಕಲಿಯಬೇಕು" ಎಂದರು.

ಈ ನಿಟ್ಟಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ವಿಚಾರವಾಗಿ ಕೆಲವು ರಾಜಕೀಯ ಪಕ್ಷಗಳು ಅನಪೇಕ್ಷಿತ ವಿವಾದ ಎಬ್ಬಿಸುತ್ತಿವೆ. ಇದರೊಂದಿಗೆ ದೇಶವನ್ನು ಭಾಷೆಯ ಆಧಾರದಲ್ಲಿ ಇಬ್ಭಾಗಿಸಲು ಯತ್ನಿಸುತ್ತಿದ್ದಾರೆ ಎಂದು ಆಡಳಿತಾರೂಢ ಡಿಎಂಕೆ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

ಕೇಂದ್ರ ಸರ್ಕಾರ ಹಿಂದಿ ಭಾಷೆಯೇತರ ರಾಜ್ಯಗಳಲ್ಲಿ ಹಿಂದಿಯನ್ನು ಹೇರುವ ಕೆಲಸ ಮಾಡುತ್ತಿದೆ ಎಂದು ಡಿಎಂಕೆ ಆರೋಪಿಸುತ್ತಿದೆ. ಈ ಹಿನ್ನೆಲೆಯಲ್ಲಿ ಅಣ್ಣಾಮಲೈ ಪ್ರಯಾಗ್‌ರಾಜ್‌ನಲ್ಲಿ ಶನಿವಾರ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದರು.

ಕೆಲವು ದಿನಗಳ ಹಿಂದೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌, ತಮಿಳುನಾಡಿನಲ್ಲಿ ತ್ರಿಭಾಷಾ ನೀತಿಯನ್ನು ಅನುಷ್ಠಾನಗೊಳಿಸದಿದ್ದರೆ ಸಮಗ್ರ ಶಿಕ್ಷಾ ನಿಧಿಯನ್ನು ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್, ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದರು.

ಈ ಹಿನ್ನೆಲೆಯಲ್ಲಿ ಮಾತನಾಡಿರುವ ಅಣ್ಣಾಮಲೈ, "ಇಂಥದ್ದೇ ಭಾಷೆಯನ್ನು ವಿದ್ಯಾರ್ಥಿಗಳು ಕಲಿಯಬೇಕೆಂದು ಯಾರೂ ಬಲವಂತ ಮಾಡುವುದಿಲ್ಲ. ಇದರ ಬದಲು ಅವರು ತಮಗಿಷ್ಟದ ಯಾವುದೇ ಒಂದು ಭಾಷೆಯನ್ನು ಆಯ್ದುಕೊಂಡು ಕಲಿಕೆ ಮುಂದುವರೆಸಬಹುದು" ಎಂದರು.

Category
ಕರಾವಳಿ ತರಂಗಿಣಿ