image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಪೊಲೀಸರಿಗೆ ಒಪ್ಪಿಸಿದ ಮಣಿಪುರದ ಐದು ಜಿಲ್ಲೆಗಳ ಸಾರ್ವಜನಿಕರು

ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಪೊಲೀಸರಿಗೆ ಒಪ್ಪಿಸಿದ ಮಣಿಪುರದ ಐದು ಜಿಲ್ಲೆಗಳ ಸಾರ್ವಜನಿಕರು

ಮಣಿಪುರ: ಕಲಹಪೀಡಿತ ಮಣಿಪುರದಲ್ಲಿ ಶಸ್ತ್ರಾಸ್ತ್ರಗಳನ್ನು ಸರ್ಕಾರಕ್ಕೆ ಒಪ್ಪಿಸುವಂತೆ ನೀಡಲಾದ ಸೂಚನೆಯ ಬೆನ್ನಲ್ಲೇ ಇದೀಗ ಐದು ಜಿಲ್ಲೆಗಳಲ್ಲಿ ಸಾರ್ವಜನಿಕರು ತಮ್ಮ ಬಳಿ ಇದ್ದ 33 ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಚುರಾಚಂದ್‌ಪುರ, ತೌಬಾಲ್, ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ ಮತ್ತು ಬಿಷ್ಣುಪುರ ಜಿಲ್ಲೆಗಳಲ್ಲಿ ಶಸ್ತ್ರಾಸ್ತ್ರಗಳನ್ನು ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಣಿಪುರ ಹಿಂಸಾಚಾರ ಭುಗಿಲೆದ್ದ ಬಳಿಕ ಪೊಲೀಸ್​ ಠಾಣೆಗಳಿಂದ ಲೂಟಿ ಮಾಡಿದ್ದ ಅಕ್ರಮ ಶಸ್ತ್ರಾಸ್ತ್ರಗಳ ಶರಣಾಗತಿ ಗಡುವನ್ನು ಇತ್ತೀಚೆಗೆ ಮಾರ್ಚ್​ 6ರವರೆಗೆ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ವಿಸ್ತರಿಸಿದ್ದರು. ಇದಕ್ಕೂ ಮುನ್ನ ಫೆಬ್ರವರಿ 20ರಂದು ಭಲ್ಲಾ ಅವರು ಲೂಟಿ ಮಾಡಿದ ಮತ್ತು ಅಕ್ರಮವಾಗಿ ಹೊಂದಿರುವ ಶಸ್ತ್ರಾಸ್ತ್ರಗಳನ್ನು ಏಳು ದಿನಗಳೊಳಗೆ ಸ್ವಯಂಪ್ರೇರಿತವಾಗಿ ಮರಳಿಸುವಂತೆ ತಿಳಿಸಿದ್ದು, ಯಾವುದೇ ಕ್ರಮಕ್ಕೆ ಮುಂದಾಗುವುದಿಲ್ಲ ಎಂದು ಭರವಸೆ ನೀಡಿದ್ದರು.

ಮುಖ್ಯ ಕಾರ್ಯದರ್ಶಿ ಪಿ.ಕೆ.ಸಿಂಗ್ ಕೂಡ ಸಾರ್ವಜನಿಕರು ಸ್ವಯಂಪ್ರೇರಣೆಯಿಂದ ಬಂದೂಕು, ಶಸ್ತ್ರಾಸ್ತ್ರಗಳನ್ನು ಮರಳಿಸಲು ಏಳು ದಿನದ ಗಡುವು ಸಾಕು ಎಂದಿದ್ದರು.

ಮೇ 2023ರಿಂದ ಇಂಫಾಲ್ ಕಣಿವೆ ಮೂಲದ ಮೈಥಿ ಮತ್ತು ಕುಕಿ ಸಮುದಾಯಗಳ ನಡುವೆ ಉಂಟಾದ ಜನಾಂಗೀಯ ಹಿಂಸಾಚಾರದಲ್ಲಿ 250ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.

ರಾಜಕೀಯ ಅನಿಶ್ಚಿತತೆಯಿಂದ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದಾದ ನಂತರ ಕೇಂದ್ರ ಸರ್ಕಾರ ಫೆಬ್ರವರಿ 13ರಂದು ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿತ್ತು.

Category
ಕರಾವಳಿ ತರಂಗಿಣಿ