image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಆಮಿಷವೊಡ್ಡಿ ಆಗ್ನೇಯ ಏಷ್ಯಾ ದೇಶಗಳಲ್ಲಿ ಅಕ್ರಮ ಕೆಲಸಗಳಲ್ಲಿ ಭಾಗಿಯಾಗಿಸಿದ್ದ 266 ಭಾರತೀಯರನ್ನು ರಕ್ಷಣೆ

ಆಮಿಷವೊಡ್ಡಿ ಆಗ್ನೇಯ ಏಷ್ಯಾ ದೇಶಗಳಲ್ಲಿ ಅಕ್ರಮ ಕೆಲಸಗಳಲ್ಲಿ ಭಾಗಿಯಾಗಿಸಿದ್ದ 266 ಭಾರತೀಯರನ್ನು ರಕ್ಷಣೆ

ನವದೆಹಲಿ: ಉದ್ಯೋಗ ಕೊಡಿಸುವ ನೆಪದಲ್ಲಿ ಕರೆದೊಯ್ದು ಆಗ್ನೇಯ ಏಷ್ಯಾ ದೇಶಗಳಲ್ಲಿ ಸೈಬರ್​ಕ್ರೈಂ ಕೇಂದ್ರದಲ್ಲಿ ಕೆಲಸಕ್ಕಾಗಿ ಇರಿಸಿಕೊಂಡಿದ್ದ 266ಕ್ಕೂ ಹೆಚ್ಚು ಭಾರತೀಯರನ್ನು ಬಿಡುಗಡೆಗೊಳಿಸಿ ಭಾರತಕ್ಕೆ ಕರೆತರಲಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಈ ಕುರಿತು ಎಕ್ಸ್​ ತಾಣದಲ್ಲಿ ಪೋಸ್ಟ್​ ಮಾಡಿರುವ ಸಚಿವಾಲಯದ ವಕ್ತಾರ ರಣ್​ಧೀರ್​​ ಜೈಸ್ವಾಲ್​, "ಐಎಎಫ್​ ವಿಮಾನದಲ್ಲಿ 266 ಭಾರತೀಯರನ್ನು ಭಾರತ ಸರ್ಕಾರ ಸುರಕ್ಷಿತವಾಗಿ ಕರೆತಂದಿದೆ. ಇವರನ್ನೆಲ್ಲಾ ಆಗ್ನೇಯ ಏಷ್ಯಾ ದೇಶಗಳಲ್ಲಿನ ಸೈಬರ್​ ಕ್ರೈಂ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದೆ. ಸೋಮವಾರ ಇದೇ ರೀತಿ 283 ಭಾರತೀಯರನ್ನು ಕರೆತರಲಾಗಿತ್ತು. ಮಯಾನ್ಮಾರ್​ ಮತ್ತು ಥೈಲ್ಯಾಂಡ್​ ಸರ್ಕಾರದ ಜೊತೆಗೆ ಭಾರತದ ರಾಯಭಾರ ಕಚೇರಿಗಳು ಭಾರತೀಯರ ಸುರಕ್ಷಿತ ಬಿಡುಗಡೆ ಹಾಗೂ ಅವರನ್ನು ಸ್ವದೇಶಕ್ಕೆ ಕರೆತರುವ ಕುರಿತು ಕೆಲಸ ಮಾಡುತ್ತಿದೆ" ಎಂದು ಮಾಹಿತಿ ನೀಡಿದ್ದಾರೆ.

ಮಾರ್ಚ್​ 10ರಂದು ಕೂಡ ಈ ಕುರಿತು ತಿಳಿಸಿದ್ದ ವಿದೇಶಾಂಗ ಇಲಾಖೆ, ಮಯಾನ್ಮಾರ್​ ಸೇರಿದಂತೆ ಆಗ್ನೇಯ ಏಷ್ಯಾ ದೇಶಗಳಲ್ಲಿ ನಕಲಿ ಉದ್ಯೋಗದ ಆಮಿಷವೊಡ್ಡಿ ಕರೆದೊಯ್ದಿರುವ ಭಾರತೀಯ ಪ್ರಜೆಗಳನ್ನು ಸುರಕ್ಷಿತವಾಗಿ ಬಿಡುಗಡೆಗೊಳಿಸಿ, ಕರೆತರುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ ಎಂದಿತ್ತು.

ಭಾರತದಿಂದ ನಕಲಿ ಉದ್ಯೋಗ ಆಮಿಷದ ನೆಪವೊಡ್ಡಿ ಕರೆದೊಯ್ದಿರುವ ಇವರನ್ನೆಲ್ಲಾ ಒತ್ತಾಯಪೂರ್ವಕವಾಗಿ ಮಯನ್ಮಾರ್​-ಥೈಲ್ಯಾಂಡ್​ ಗಡಿಗಳಲ್ಲಿ ವಂಚನೆ ಪ್ರಕರಣದಲ್ಲಿ ಕಾರ್ಯನಿರ್ವಹಿಸಲು ಹಾಗೂ ಸೈಬರ್​ಕ್ರೈಂ ಪ್ರಕರಣದಲ್ಲಿ ತೊಡಗಿಸಲಾಗಿದೆ ಎಂದು ಸಚಿವಾಲಯದ ಹೇಳಿಕೆಯಲ್ಲಿ ತಿಳಿಸಲಾಗಿದೆ. ಮಯಾನ್ಮಾರ್​ ಮತ್ತು ಥೈಲ್ಯಾಂಡ್​ನಲ್ಲಿನ ಭಾರತೀಯ ರಾಯಭಾರಿಗಳು ಸ್ಥಳೀಯ ಅಧಿಕಾರಿಗಳ ಸಹಯೋಗದಿಂದ ಇಂದು 283 ಭಾರತೀಯರನ್ನು ರಕ್ಷಿಸಿದ್ದು, ಅವರನ್ನು ಥೈಲ್ಯಾಂಡ್​ನಲ್ಲಿನ ಮೆ ಸೊಟ್​ನಿಂದ ಐಎಎಫ್​ ವಿಮಾನದ ಮೂಲಕ ಕರೆತರಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿತ್ತು.

ಈ ರೀತಿಯ ಉದ್ಯೋಗ ವಂಚನೆ ಪ್ರಕರಣದ ಬಗ್ಗೆ ಜನರ ಎಚ್ಚರಿಕೆ ವಹಿಸುವಂತೆ ಸರ್ಕಾರ ತಿಳಿಸಿದೆ. ವಿದೇಶದಲ್ಲಿ ಉದ್ಯೋಗಕ್ಕೆ ಹೋಗುವ ಮುನ್ನ ನೇಮಕಾತಿ ಏಜೆಂಟ್​​ ಮತ್ತು ಕಂಪನಿಗಳ ಕುರಿತು ಪೂರ್ವ ಪರಿಶೀಲನೆ ನಡೆಸುವುದು ಅಗತ್ಯ ಎಂದು ಸಲಹೆ ನೀಡಿದೆ.

Category
ಕರಾವಳಿ ತರಂಗಿಣಿ