ಪಶ್ಚಿಮ ಬಂಗಾಳ: 25,753 ಶಿಕ್ಷಕರ ನೇಮಕಾತಿ ರದ್ದುಗೊಳಿಸಿದ ಕಲ್ಕತ್ತಾ ಹೈಕೋರ್ಟ್(cukatta high court) ತೀರ್ಪನ್ನು ಸುಪ್ರೀಂ ಕೋರ್ಟ್(supreme court) ಎತ್ತಿಹಿಡಿದಿದೆ. ಇದರಿಂದ ಹೈಕೋರ್ಟ್ ಆದೇಶದಂತೆ 25,753 ಶಿಕ್ಷಕರ(teaches) ನೇಮಕ ರದ್ದಾಗಲಿವೆ.
ಶಿಕ್ಷಕರ ಆಯ್ಕೆಯಲ್ಲಿ ಅಕ್ರಮ ನಡೆದಿದೆ ಎಂಬ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿರುವ ಸುಪ್ರೀಂಕೋರ್ಟ್, ಶಿಕ್ಷಕರ ನೇಮಕವನ್ನು ರದ್ದುಗೊಳಿಸಿದೆ. ಹೀಗಾಗಿ ಈ ಹುದ್ದೆಗಳಿಗೆ ಹೊಸದಾಗಿ ಪರೀಕ್ಷೆ ನಡೆಸಿ ಶೀಘ್ರವೇ ಈ ಎಲ್ಲ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಬೇಕು ಎಂದು ಸಿಪಿಐಎಂ(cpim) ಪಕ್ಷ ಸರ್ಕಾರವನ್ನು ಒತ್ತಾಯಿಸಿದೆ. ಇಲ್ಲದಿದ್ದರೆ ಅದು ರಾಜ್ಯದ ಶಿಕ್ಷಣ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಎಚ್ಚರಿಕೆ ಕೂಡಾ ನೀಡಿದೆ.
ರಾಜ್ಯದ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳಲ್ಲಿ 25,753 ಶಿಕ್ಷಕರು ಮತ್ತು ಇತರ ಸಿಬ್ಬಂದಿಗಳ ನೇಮಕಾತಿಯನ್ನು ಅಕ್ರಮ ಎಂದಿರುವ ಕೋರ್ಟ್, ಈ ಆಯ್ಕೆ ಪ್ರಕ್ರಿಯೆಯನ್ನು ರದ್ದುಗೊಳಿಸಿ ಆದೇಶ ನೀಡಿದೆ.
ಮುಖ್ಯ ನ್ಯಾಯಮೂರ್ತಿ(gudge) ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠ ಕಲ್ಕತ್ತಾ ಹೈಕೋರ್ಟ್ 2024ರ ಏಪ್ರಿಲ್ 22 ರಂದು ನೀಡಿದ್ದ ತೀರ್ಪನ್ನು ಎತ್ತಿ ಹಿಡಿದಿದೆ. ನೇಮಕಾತಿಗಳನ್ನು ರದ್ದುಗೊಳಿಸಿ, ತೃಣಮೂಲ ಕಾಂಗ್ರೆಸ್(trinamool congress) ನೇತೃತ್ವದ ರಾಜ್ಯ ಸರ್ಕಾರವು ಮೂರು ತಿಂಗಳೊಳಗೆ ಹೊಸ ಆಯ್ಕೆ ಪ್ರಕ್ರಿಯೆಯನ್ನು ಪ್ರಾರಂಭಿಸುವಂತೆಯೂ ತನ್ನ ಆದೇಶದಲ್ಲಿ ಹೇಳಿದೆ.
ಸುಪ್ರೀಂಕೋರ್ಟ್ನ ಮಹತ್ವದ ತೀರ್ಪು ಹೊರ ಬಂದ ಬೆನ್ನಲ್ಲೇ ಮಾತನಾಡಿದ ಸಿಪಿಐ(ಎಂ) ಪಶ್ಚಿಮ ಬಂಗಾಳ(west Bengal) ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಸಲೀಂ, ರಾಜ್ಯದಲ್ಲಿ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ನಡೆದಿರುವುದನ್ನು ಒಪ್ಪಿಕೊಂಡಿರುವ ಸುಪ್ರೀಂ ನೇಮಕಾತಿಯನ್ನು ರದ್ದುಗೊಳಿಸಿದೆ. ಈ ಹಿನ್ನೆಲೆಯಲ್ಲಿ ಇದು ರಾಜ್ಯದ ಶಾಲೆಗಳಲ್ಲಿನ ಶಿಕ್ಷಣ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ. ಸುಪ್ರೀಂ ಕೋರ್ಟ್ ನಿರ್ದೇಶನವನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ, ತಕ್ಷಣಕ್ಕೆ ಹುದ್ದೆ ಭರ್ತಿಗೆ ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.