image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಒಟಿಟಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಅಶ್ಲೀಲ ಕಂಟೆಂಟ್​ : ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್​ ನೋಟಿಸ್

ಒಟಿಟಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಅಶ್ಲೀಲ ಕಂಟೆಂಟ್​ : ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್​ ನೋಟಿಸ್

ನವದೆಹಲಿ: ಒಟಿಟಿ ಪ್ಲಾಟ್‌ಫಾರ್ಮ್‌ಗಳು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ 'ಅಶ್ಲೀಲತೆ' ಹೆಚ್ಚಿದ್ದು, ಅದನ್ನು ನಿರ್ಬಂಧಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ಕೈಗೆತ್ತಿಕೊಂಡಿತು. ಈ ಕುರಿತು ಕೇಂದ್ರ ಸರ್ಕಾರ ಸೇರಿದಂತೆ ಹಲವಾರು ಒಟಿಟಿ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ನೋಟಿಸ್ ಜಾರಿ ಮಾಡಿ, ಈ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಕೇಳಿದೆ.

ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ಆಗಸ್ಟೀನ್ ಜಾರ್ಜ್ ಮಸಿಹ್ ಅವರಿದ್ದ ಪೀಠದ ಮುಂದೆ ಈ ಅರ್ಜಿಗಳ ವಿಚಾರಣೆ ನಡೆಯಿತು. ಒಟಿಟಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಲೈಂಗಿಕತೆಯನ್ನು ಪ್ರಚೋದಿಸುವ ಅಶ್ಲೀಲ ಕಂಟೆಂಟ್​ ಗಳು ಹೆಚ್ಚಿವೆ. ಇದರ ಮೇಲೆ ನಿಷೇಧ ಹೇರಿ, ರಾಷ್ಟ್ರೀಯ ಕಂಟೆಂಟ್​ ನಿಯಂತ್ರಣ ಪ್ರಾಧಿಕಾರವನ್ನು ಸ್ಥಾಪಿಸಬೇಕು. ಅದರ ಮೇಲೆ ಮಾರ್ಗಸೂಚಿಗಳನ್ನು ಹೊರಡಿಸುವಂತೆ ಐದು ಅರ್ಜಿದಾರರು ಕೋರಿದ್ದಾರೆ.

ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಆದೇಶಿಸಿದೆ. ಕೇಂದ್ರವನ್ನು ಪ್ರತಿನಿಧಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಈ ವಿಷಯದ ಮೇಲೆ ಈಗಾಗಲೇ ನಿಬಂಧನೆಗಳು ಜಾರಿಯಲ್ಲಿವೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಕ್ರಮಗಳನ್ನು ಜಾರಿಗೆ ತರಲಾಗುವುದು ಎಂದು ಪೀಠಕ್ಕೆ ತಿಳಿಸಿದರು.

ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಪೀಠವು ಮಹತ್ವದ ಹೇಳಿಕೆಗಳನ್ನು ನೀಡಿತು. ಲೈಂಗಿಕಪ್ರೇರಿತ ಕಂಟೆಂಟ್​​ ಗಳು ಮಕ್ಕಳು, ಯುವಕರು ಹಾಗೂ ವಯಸ್ಕರ ಮನಸ್ಸನ್ನು ಕಲುಷಿತಗೊಳಿಸುತ್ತದೆ. ಇದು ವಿಕೃತ ಮತ್ತು ಅಸ್ವಾಭಾವಿಕ ಲೈಂಗಿಕತೆಗೆ ಕಾರಣವಾಗಬಹುದು ಎಂದು ಕಳವಳ ವ್ಯಕ್ತಪಡಿಸಿತು. ಇದರಿಂದ ದೇಶದಲ್ಲಿ ಅಪರಾಧ ಪ್ರಮಾಣ ಹೆಚ್ಚಾಗುವ ಅಪಾಯವಿದೆ ಎಂದು ಎಚ್ಚರಿಸಿತು.

Category
ಕರಾವಳಿ ತರಂಗಿಣಿ