image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

'ಆಪರೇಷನ್ ಸಿಂಧೂರ್​' ಸೇನಾ ಕಾರ್ಯಾಚರಣೆ ಮುಂದುವರಿಯುತ್ತದೆ: ರಾಜನಾಥ್​ ಸಿಂಗ್

'ಆಪರೇಷನ್ ಸಿಂಧೂರ್​' ಸೇನಾ ಕಾರ್ಯಾಚರಣೆ ಮುಂದುವರಿಯುತ್ತದೆ: ರಾಜನಾಥ್​ ಸಿಂಗ್

ನವದೆಹಲಿ: ಪಹಲ್ಗಾಮ್​ ಉಗ್​ರ ದಾಳಿಗೆ ಪ್ರತಿಯಾಗಿ ಪಾಕಿಸ್ತಾನ, ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ನಡೆಸಲಾದ 'ಆಪರೇಷನ್​ ಸಿಂಧೂರ್'​ ಸೇನಾ ಕಾರ್ಯಾಚರಣೆ ಇಲ್ಲಿಗೆ ಮುಗಿದಿಲ್ಲ. ಇದು ಮುಂದುವರಿಯಲಿದೆ ಎಂದು ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ತಿಳಿಸಿದ್ದಾರೆ.

ಸೇನಾ ದಾಳಿಯ ಕುರಿತು ಚರ್ಚಿಸಲು ತಮ್ಮ ಅಧ್ಯಕ್ಷತೆಯಲ್ಲಿ ಗುರುವಾರ ಕರೆಯಲಾದ ಸರ್ವಪಕ್ಷ ಸಭೆಯಲ್ಲಿ ಮಾಹಿತಿ ನೀಡಿದ ರಕ್ಷಣಾ ಸಚಿವರು, ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ಜನರು ಜಾಗರೂಕರಾಗಿರಬೇಕು. ಈ ಕಾರ್ಯಾಚರಣೆ ನಿಲ್ಲಲ್ಲ ಎಂದು ಹೇಳಿದರು.

ಏಪ್ರಿಲ್ 22 ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆ, ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಮತ್ತು ಅದರ ನಂತರದ ಪರಿಸ್ಥಿತಿಯ ಬಗ್ಗೆ ಸರ್ವ ಪಕ್ಷಗಳಿಗೆ ಮಾಹಿತಿ ನೀಡಿದರು.

ಬುಧವಾರ ನಡೆದ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಯಲ್ಲಿರುವ ಒಂಬತ್ತು ಭಯೋತ್ಪಾದಕ ಶಿಬಿರಗಳನ್ನು ಧ್ವಂಸ ಮಾಡಲಾಗಿದೆ. ಕನಿಷ್ಠ 100 ಭಯೋತ್ಪಾದಕರು ಹತರಾಗಿದ್ದಾರೆ. ಹಲವರು ಗಾಯಗೊಂಡಿದ್ದಾರೆ ಎಂದು ರಾಜನಾಥ್​ ಸಿಂಗ್​ ತಿಳಿಸಿದ್ದಾರೆ.

ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಸರ್ವಪಕ್ಷ ಸಭೆಯು 15 ದಿನದಲ್ಲಿ ನಡೆದ ಎರಡನೇ ಸಭೆಯಾಗಿದೆ. ಕೇಂದ್ರ ಸಚಿವರಾದ ಅಮಿತ್ ಶಾ, ಎಸ್ ಜೈಶಂಕರ್, ಜೆ ಪಿ ನಡ್ಡಾ ಮತ್ತು ನಿರ್ಮಲಾ ಸೀತಾರಾಮನ್ ಅವರು ಸರ್ಕಾರವನ್ನು ಪ್ರತಿನಿಧಿಸಿದರೆ, ಕಾಂಗ್ರೆಸ್​ನಿಂದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ, ತೃಣಮೂಲ ಕಾಂಗ್ರೆಸ್ ನ ಸಂದೀಪ್ ಬಂಡೋಪಾಧ್ಯಾಯ ಮತ್ತು ಡಿಎಂಕೆಯ ಟಿ ಆರ್ ಬಾಲು, ಸಮಾಜವಾದಿ ಪಕ್ಷದ ರಾಮ್ ಗೋಪಾಲ್ ಯಾದವ್, ಎಎಪಿಯ ಸಂಜಯ್ ಸಿಂಗ್, ಶಿವಸೇನೆ (ಯುಬಿಟಿ)ಯ ಸಂಜಯ್ ರಾವತ್, ಎನ್‌ಸಿಪಿ (ಎಸ್‌ಪಿ)ಯ ಸುಪ್ರಿಯಾ ಸುಳೆ, ಬಿಜೆಡಿಯ ಸಸ್ಮಿತ್ ಪಾತ್ರ ಮತ್ತು ಸಿಪಿಐ (ಎಂ)ನ ಜಾನ್ ಬ್ರಿಟ್ಟಾಸ್, ಜೆಡಿ (ಯು) ನಾಯಕ ಸಂಜಯ್ ಝಾ, ಕೇಂದ್ರ ಸಚಿವ ಮತ್ತು ಎಲ್‌ಜೆಪಿ (ರಾಮ್ ವಿಲಾಸ್) ನಾಯಕ ಚಿರಾಗ್ ಪಾಸ್ವಾನ್ ಮತ್ತು ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಕೂಡ ಸಭೆಯಲ್ಲಿ ಭಾಗವಹಿಸಿದ್ದರು.

ಸಭೆಯಲ್ಲಿ ತಮ್ಮ ಅಭಿಪ್ರಾಯ ಮತ್ತು ಸಲಹೆಗಳನ್ನು ಹಂಚಿಕೊಂಡ ಎಲ್ಲ ವಿಪಕ್ಷಗಳು ಸೇನಾ ಕಾರ್ಯಾಚರಣೆಯಲ್ಲಿ ಅಭಿನಂದಿಸಿದವು. ಸರ್ಕಾರ ಮತ್ತು ಸೇನೆಯು ತೆಗೆದುಕೊಳ್ಳುವ ನಿರ್ಧಾರಗಳನ್ನು ಬೆಂಬಲಿಸುವುದಾಗಿ ಒಕ್ಕೊರಲಿನಿಂದ ಹೇಳಿರುವುದು ವಿಶೇಷವಾಗಿದೆ.

Category
ಕರಾವಳಿ ತರಂಗಿಣಿ