image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ನೂರ್ ಖಾನ್, ಮುರಿಯ್ ಮತ್ತು ರಫೀಕಿ ವಾಯುನೆಲೆಗಳಿಗೆ ಭಾರತ ದಾಳಿ ಮಾಡಿದೆ : ಪಾಕಿಸ್ತಾನ್

ನೂರ್ ಖಾನ್, ಮುರಿಯ್ ಮತ್ತು ರಫೀಕಿ ವಾಯುನೆಲೆಗಳಿಗೆ ಭಾರತ ದಾಳಿ ಮಾಡಿದೆ : ಪಾಕಿಸ್ತಾನ್

ಪಾಕಿಸ್ತಾನ : ಭಾರತವು ತನ್ನ ಮೂರು ವಾಯುನೆಲೆಗಳನ್ನು ಗುರಿಯಾಗಿಸಿ ಕ್ಷಿಪಣಿಗಳು ಮತ್ತು ಡ್ರೋನ್‌ಗಳ ದಾಳಿ ಮಾಡಿದೆ ಎಂದು ಪಾಕಿಸ್ತಾನ ಹೇಳಿಕೊಂಡಿದೆ. ಬೆಳಗಿನ ಜಾವ 4 ಗಂಟೆಗೆ ಇಸ್ಲಾಮಾಬಾದ್‌ನಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಪಾಕಿಸ್ತಾನದ ಮಿಲಿಟರಿ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ ಮಾತನಾಡಿ, ಪಾಕಿಸ್ತಾನ ವಾಯುಪಡೆಯ ನೂರ್ ಖಾನ್ (ಚಕ್ಲಾಲಾ, ರಾವಲ್ಪಿಂಡಿ), ಮುರಿಯ್ (ಚಕ್ವಾಲ್) ಮತ್ತು ರಫೀಕಿ (ಜಾಂಗ್ ಜಿಲ್ಲೆಯ ಶೋರ್ಕೋಟ್) ವಾಯುನೆಲೆಗಳನ್ನು ಗುರಿಯಾಗಿಸಿ ಭಾರತ ದಾಳಿ ಮಾಡಿದೆ ಎಂದಿದ್ದಾರೆ.

ಹೊನಗೊನ್ನೆ ಸೊಪ್ಪಿನ‌ ಔಷದೀಯ ಮಹತ್ವ ತಿಳಿದರೆ ದಿನಾ ತಿನ್ನುವಿರಿ

ಆದರೆ ವಾಯುಪಡೆಯ ಎಲ್ಲಾ ಸ್ವತ್ತು ಸುರಕ್ಷಿತವಾಗಿವೆ. ಭಾರತವು ತನ್ನ ಜೆಟ್‌ಗಳ ಮೂಲಕ ಆಕಾಶದಿಂದ ಕ್ಷಿಪಣಿಗಳನ್ನು ಪ್ರಯೋಗಿಸಿದೆ. ಪಾಕಿಸ್ತಾನದ ವಾಯು ರಕ್ಷಣಾ ವ್ಯವಸ್ಥೆಯು ಹಲವು ಕ್ಷಿಪಣಿಗಳನ್ನು ತಡೆದಿದೆ. ಇದು ಪ್ರದೇಶವನ್ನು ರಣರಂಗವಾಗಿಸುವ ದುಷ್ಟ ಕೃತ್ಯವಾಗಿದೆ ಮತ್ತು ಪಾಕಿಸ್ತಾನವು ಭಾರತದ ಈ ಆಕ್ರಮಣಕ್ಕೆ ತಕ್ಕ ಪ್ರತ್ಯುತ್ತರ ನೀಡುತ್ತದೆ. ಭಾರತ ನಮ್ಮ ಪ್ರತಿಕ್ರಿಯೆಗಾಗಿ ಕಾಯಬೇಕು ಎಂದು ತಿಳಿಸಿದರು. ಪಾಕಿಸ್ತಾನ ವಿಮಾನ ನಿಲ್ದಾಣ ಪ್ರಾಧಿಕಾರ (ಪಿಎಎ) ವಿಮಾನ ಸೇವೆಯನ್ನು ಸ್ಥಗಿತಗೊಳಿಸಿದೆ. ಪಾಕಿಸ್ತಾನದ ವಾಯುಪ್ರದೇಶವನ್ನು ಬೆಳಗ್ಗೆ 3.15 ರಿಂದ ಮಧ್ಯಾಹ್ನ 12ರ ವರೆಗೆ ಮುಚ್ಚಲಾಗಿದೆ ಎಂದು ಪ್ರಕಟಣೆ ಹೊರಡಿಸಿದೆ. ಮಧ್ಯಾಹ್ನ 12 ಗಂಟೆಗೆ ಹೆಚ್ಚಿನ ಮಾಹಿತಿ ನೀಡುವುದಾಗಿ ಪಿಎಎ ತಿಳಿಸಿದೆ.

ಏಪ್ರಿಲ್ 22ರಂದು ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಭಾರತೀಯ ಸಶಸ್ತ್ರ ಪಡೆಗಳು ಬುಧವಾರ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿನ ಭಯೋತ್ಪಾದಕ ಲಾಂಚ್‌ಪ್ಯಾಡ್‌ಗಳನ್ನು ಗುರಿಯಾಗಿಸಿಕೊಂಡು ದಾಳಿಗಳನ್ನು ನಡೆಸಿದೆ. ಇದರಿಂದ ಎರಡೂ ದೇಶಗಳ ನಡುವೆ ಯುದ್ಧದ ಕಾರ್ಮೋಡ ಆವರಿಸಿದೆ. ಜಮ್ಮು ಬಳಿ ಭಾರತೀಯ ಸೇನೆಯು ಪಾಕಿಸ್ತಾನಿ ಚೆಕ್​ ಪೋಸ್ಟ್‌ಗಳು ಮತ್ತು ಭಯೋತ್ಪಾದಕರ ಲಾಂಚ್​ಪ್ಯಾಡ್‌ಗಳನ್ನು ನಾಶಪಡಿಸಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ. ಶನಿವಾರ ಮುಂಜಾನೆ ಪಾಕಿಸ್ತಾನದ ಕನಿಷ್ಠ ನಾಲ್ಕು ವಾಯುನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ ನಡೆಸಿದೆ. ಇದರಿಂದ ಉಭಯ ದೇಶಗಳ ನಡುವಿನ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ.

ಪಾಕಿಸ್ತಾನವು ಶನಿವಾರ 26 ಸ್ಥಳಗಳ ಮೇಲೆ ದಾಳಿ ಮಾಡಿದ ನಂತರ ಭಾರತವು ಪ್ರತಿದಾಳಿ ನಡೆಸಲು ಪ್ರಾರಂಭಿಸಿದೆ. ಗಡಿ ನಿಯಂತ್ರಣ ರೇಖೆಯ (LoC) ಉದ್ದಕ್ಕೂ ಹಲವೆಡೆ ಗುಂಡಿನ ಚಕಮಕಿ ಮುಂದುವರೆದಿದೆ.

Category
ಕರಾವಳಿ ತರಂಗಿಣಿ