image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಯಾವುದೇ ಭಯೋತ್ಪಾದಕ ಕೃತ್ಯವನ್ನು ದೇಶದ ವಿರುದ್ಧದ 'ಯುದ್ಧ ಕೃತ್ಯ' ಎಂದು ಪರಿಗಣಿಸಲಾಗುತ್ತದೆ : ಭಾರತ ಸರ್ಕಾರ

ಯಾವುದೇ ಭಯೋತ್ಪಾದಕ ಕೃತ್ಯವನ್ನು ದೇಶದ ವಿರುದ್ಧದ 'ಯುದ್ಧ ಕೃತ್ಯ' ಎಂದು ಪರಿಗಣಿಸಲಾಗುತ್ತದೆ : ಭಾರತ ಸರ್ಕಾರ

ನವದೆಹಲಿ: ಪಹಲ್ಗಾಮ್​ ಉಗ್ರ ದಾಳಿಗೆ ಪ್ರತಿಯಾಗಿ ಭಾರತೀಯ ಸೇನಾಪಡೆಗಳು ನಡೆಸಿದ ಕಾರ್ಯಾಚರಣೆಗೆ ಪ್ರತೀಕಾರವಾಗಿ ಪಾಕಿಸ್ತಾನವೂ ದಾಳಿ ಮಾಡುತ್ತಿದೆ. ಈ ನಡುವೆ, ಭವಿಷ್ಯದಲ್ಲಿ ನಡೆಯುವ ಯಾವುದೇ ಭಯೋತ್ಪಾದಕ ಕೃತ್ಯವನ್ನು ದೇಶದ ವಿರುದ್ಧದ 'ಯುದ್ಧ ಕೃತ್ಯ' ಎಂದು ಪರಿಗಣಿಸಲಾಗುತ್ತದೆ ಮತ್ತು ಅದಕ್ಕೆ ತಕ್ಕಂತೆ ಪ್ರತಿಕ್ರಿಯಿಸಲಾಗುತ್ತದೆ ಎಂದು ಸರ್ಕಾರದ ಉನ್ನತ ಮೂಲಗಳು  ತಿಳಿಸಿವೆ. ಇನ್ನು ಮುಂದೆ ನಡೆಯುವ ಯಾವುದೇ ಉಗ್ರಗಾಮಿ ಚಟುವಟಿಕೆಗಳನ್ನು ನಡೆಸಿದಲ್ಲಿ ಅದನ್ನು 'ಯುದ್ಧದ ಕೃತ್ಯ' ಎಂದೇ ಪರಿಗಣಿಸಿ ಅದಕ್ಕೆ ತಕ್ಕ ಪ್ರತ್ಯುತ್ತರ ನೀಡಲು ಭಾರತ ಸರ್ಕಾರ ನಿರ್ಧರಿಸಿದೆ.

ಪಾಕಿಸ್ತಾನವು ಗಡಿಭಾಗದಲ್ಲಿ ಆಸ್ಪತ್ರೆ, ಶಾಲೆ, ಜನವಸತಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡುತ್ತಿದೆ. ಇದನ್ನು ತಡೆಯಲು ಪ್ರಧಾನಿ ನರೇಂದ್ರ ಮೋದಿ ಅವರು ಸಶಸ್ತ್ರ ಪಡೆಗಳ ಮುಖ್ಯಸ್ಥರ ಜೊತೆ ಸರಣಿ ಮಾತುಕತೆ ನಡೆಸಿದ್ದಾರೆ. ಪಾಕಿಸ್ತಾನವು ಮುಂದೆ ನಡೆಸುವ ಯಾವುದೇ ದಾಳಿಯನ್ನು ದೇಶದ ವಿರುದ್ಧ ಸಾರಿದ 'ಯುದ್ಧದ ಕೃತ್ಯ' ಎಂದು ಪರಿಗಣಿಸಲಾಗುತ್ತದೆ. ಅದಕ್ಕೆ ತಕ್ಕ ಪ್ರತಿಕ್ರಿಯೆ ನೀಡಲು ಭಾರತೀಯ ಸೇನೆ ನಿರ್ಧರಿಸಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಈ ನಿರ್ಧಾರದೊಂದಿಗೆ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರವು ಭಯೋತ್ಪಾದಕ ಕೃತ್ಯಗಳಿಗೆ ಅಂತ್ಯವಾಡಲು ಬಯಸಿದೆ. ಉಗ್ರ ಸಂಘಟನೆಗಳಿಗೆ ಬೆಂಬಲ ನೀಡಿ, ಭಾರತವನ್ನು ಕಾಡುತ್ತಿರುವ ನೆರೆಯ ರಾಷ್ಟ್ರಕ್ಕೆ ಭಾರತ ಬಲವಾದ ಸಂದೇಶ ರವಾನಿಸಿದೆ ಎಂದು ವರದಿಯಾಗಿದೆ.

Category
ಕರಾವಳಿ ತರಂಗಿಣಿ