image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಭಾರತದ ಬ್ಯಾಲಿಸ್ಟಿಕ್ ಕ್ಷಿಪಣಿಗಳು ನೂರ್ ಖಾನ್ ವಾಯುನೆಲೆ ಮತ್ತು ಇತರ ಪ್ರದೇಶಗಳನ್ನು ಹೊಡೆದುರುಳಿಸಿವೆ : ಶಹಾಬಾಜ್ ಶರೀಫ್

ಭಾರತದ ಬ್ಯಾಲಿಸ್ಟಿಕ್ ಕ್ಷಿಪಣಿಗಳು ನೂರ್ ಖಾನ್ ವಾಯುನೆಲೆ ಮತ್ತು ಇತರ ಪ್ರದೇಶಗಳನ್ನು ಹೊಡೆದುರುಳಿಸಿವೆ : ಶಹಾಬಾಜ್ ಶರೀಫ್

ನವದೆಹಲಿ: ಪಾಕಿಸ್ತಾನದ ವಾಯುನೆಲೆಗಳ ಮೇಲಿನ ಭಾರತದ ದಾಳಿಯನ್ನು ಇದುವರೆಗೂ ನಿರಾಕರಿಸುತ್ತಲೇ ಬಂದಿದ್ದ ಪಾಕ್​ ಪ್ರಧಾನಿ ಪ್ರಧಾನಿ ಶೆಹಬಾಜ್ ಷರೀಫ್, ಇದೀಗ ಭಾರತೀಯ ಸೇನಾ ದಾಳಿಯನ್ನು ಒಪ್ಪಿಕೊಂಡಿದ್ದಾರೆ. ಮೇ 10ರಂದು ಭಾರತದ ಬ್ಯಾಲಿಸ್ಟಿಕ್ ಕ್ಷಿಪಣಿಗಳು ನೂರ್ ಖಾನ್ ವಾಯುನೆಲೆ ಮತ್ತು ಇತರ ತಾಣಗಳನ್ನು ಹೊಡೆದುರುಳಿಸಿವೆ ಎಂದು ತಿಳಿಸಿದ್ದಾರೆ.

ಸಮಾರಂಭವೊಂದರಲ್ಲಿ ಮಾತನಾಡಿರುವ ಷರೀಫ್, "ಮೇ 10ರಂದು ಬೆಳಗಿನಜಾವ 2:30ರ ಸುಮಾರಿಗೆ, ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ನನಗೆ ಕರೆ ಮಾಡಿ ಭಾರತದ ಬ್ಯಾಲಿಸ್ಟಿಕ್ ಕ್ಷಿಪಣಿಗಳು ನೂರ್ ಖಾನ್ ವಾಯುನೆಲೆ ಮತ್ತು ಇತರ ಪ್ರದೇಶಗಳನ್ನು ಹೊಡೆದಿರುಳಿಸಿದ್ದಾಗಿ ಮಾಹಿತಿ ನೀಡಿದರು. ದಾಳಿಯ ವೇಳೆ ನಮ್ಮ ವಾಯುಪಡೆಯು ದೇಶವನ್ನು ಉಳಿಸಲು ಸ್ಥಳೀಯ ತಂತ್ರಜ್ಞಾನ ಮತ್ತು ಚೀನೀ ಜೆಟ್‌ಗಳನ್ನು ಬಳಸಿತ್ತು. ಆದರೆ, ಭಾರತದ ಕ್ಷಿಪಣಿಗಳು ತಮ್ಮ ಗುರಿ ಸಾಧಿಸಿ ಹೊಡೆದುರುಳಿಸಿವೆ ಎಂದು ದೃಢಪಡಿಸಿದ್ದಾರೆ'' ಎಂದು ಹೇಳಿದ್ದಾರೆ.

ಈ ಕುರಿತು ಬಿಜೆಪಿ ನಾಯಕ ಅಮಿತ್ ಮಾಳವೀಯ ಅವರು ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದು, "ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು, ಜನರಲ್ ಅಸಿಮ್ ಮುನೀರ್ ಅವರು ಬೆಳಗಿನ ಜಾವ 2:30ಕ್ಕೆ ತಮಗೆ ಕರೆ ಮಾಡಿ ಭಾರತ ನೂರ್ ಖಾನ್ ವಾಯುನೆಲೆ ಮತ್ತು ಇತರ ಹಲವಾರು ಸ್ಥಳಗಳ ಮೇಲೆ ಬಾಂಬ್ ದಾಳಿ ನಡೆಸಿದೆ ಎಂದು ತಿಳಿಸಿದ್ದರು ಎಂದು ಒಪ್ಪಿಕೊಂಡಿದ್ದಾರೆ" ಎಂದು ಬರೆದುಕೊಂಡಿದ್ದಾರೆ.

Category
ಕರಾವಳಿ ತರಂಗಿಣಿ