ಇಸ್ಲಾಮಾಬಾದ್: ಭಾರತದೊಂದಿಗಿನ ಇತ್ತೀಚಿನ ಸಂಘರ್ಷದಲ್ಲಿ ಸಶಸ್ತ್ರ ಪಡೆಗಳನ್ನು "ಯಶಸ್ವಿಯಾಗಿ" ಮುನ್ನಡೆಸಿದ್ದಕ್ಕಾಗಿ ಪಾಕಿಸ್ತಾನ ಸರ್ಕಾರ, ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರನ್ನು ಫೀಲ್ಡ್ ಮಾರ್ಷಲ್ ಹುದ್ದೆಗೇರಿಸಿ ಬಡ್ತಿ ನೀಡಿದೆ ಎಂದು ಅಲ್ಲಿನ ಸರ್ಕಾರಿ ಸ್ವಾಮ್ಯದ ವಾಹಿನಿ ವರದಿ ಮಾಡಿದೆ. ಪ್ರಧಾನಿ ಶೆಹಬಾಜ್ ಷರೀಫ್ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. "ಜನರಲ್ ಅಸಿಮ್ ಮುನೀರ್ ಅವರನ್ನು ದೇಶದ ಫೀಲ್ಡ್ ಮಾರ್ಷಲ್ ಆಗಿ ಬಡ್ತಿ ನೀಡುವ ಮಹತ್ವದ ನಿರ್ಧಾರವನ್ನು ಸಂಪುಟ ತೆಗೆದುಕೊಂಡಿದೆ" ಎಂದು ವರದಿ ಹೇಳಿದೆ. ಭಾರತದೊಂದಿಗಿನ ಸಂಘರ್ಷದಲ್ಲಿ ಅವರ "ಅನುಕರಣೀಯ ಪಾತ್ರ"ಕ್ಕಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅದು ತಿಳಿಸಿದೆ.