image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಹುತಾತ್ಮ ಯೋಧರ ಕುಟುಂಬಗಳಿಗೆ ಸಾಮಾಜಿಕ ಮತ್ತು ಆರ್ಥಿಕ ಬಲ ತುಂಬಲು ಉತ್ತರಾಖಂಡ್​ ಸರ್ಕಾರ ಮಹತ್ವದ ನಿರ್ಧಾರ

ಹುತಾತ್ಮ ಯೋಧರ ಕುಟುಂಬಗಳಿಗೆ ಸಾಮಾಜಿಕ ಮತ್ತು ಆರ್ಥಿಕ ಬಲ ತುಂಬಲು ಉತ್ತರಾಖಂಡ್​ ಸರ್ಕಾರ ಮಹತ್ವದ ನಿರ್ಧಾರ

ಉತ್ತರಾಖಂಡ್​ : ಉತ್ತರಾಖಂಡ ಸರ್ಕಾರ ಹುತಾತ್ಮ ಸೈನಿಕರ ಕುಟುಂಬಗಳಿಗೆ ಸಂಬಂಧಿಸಿದಂತೆ ಮಹಹತ್ವದ ಘೋಷಣೆಯೊಂದನ್ನು ಮಾಡಿದೆ. ದೇಶಕ್ಕಾಗಿ ಪ್ರಾಣ ಅರ್ಪಿಸುವ ಯೋಧರ ಕುಟುಂಬಗಳಿಗೆ ನೀಡುವ ಪರಿಹಾರ ಧನವನ್ನು ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಉತ್ತರಾಖಂಡ್​ ಸರ್ಕಾರ ಈ ಹಿಂದೆ ಹುತಾತ್ಮ ಯೋಧರ ಕುಟುಂಬಗಳಿಗೆ 10 ಲಕ್ಷ ರೂಪಾಯಿ ಪರಿಹಾರ ಧನ ನೀಡುತ್ತಿತ್ತು. ಇದೀಗ ಹೊಸ ಆದೇಶದ ಪ್ರಕಾರ ಪರಿಹಾರ ಹಣವನ್ನು 50 ಲಕ್ಷ ರೂಪಾಯಿಗೆ ಹೆಚ್ಚಿಸಿದೆ. ಈ ಕುರಿತಂತೆ ಮುಖ್ಯಮಂತ್ರಿ ಪುಷ್ಕರ್​ ಸಿಂಗ್​ ಧಾಮಿ ತಿಳಿಸಿದ್ದು, ಜುಲೈ 26, 2024ರಿಂದ ಅನ್ವಯವಾಗುವಂತೆ ಈ ಆದೇಶ ಜಾರಿಗೆ ಬರಲಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಸೈನಿಕರ ಕಲ್ಯಾಣ ಸಚಿವ ಗಣೇಶ್​ ಜೋಶಿ, ಮುಖ್ಯಮಂತ್ರಿ ಪುಷ್ಕರ್​ ಸಿಂಗ್​ ಸಿಂಗ್​ ಧಾಮಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ. ಈ ಉತ್ತಮ ನಿರ್ಧಾರ ಸೈನಿಕರಿಗೆ ಮತ್ತು ಅವರ ಕುಟುಂಬಗಳಿಗೆ ನೀಡುವ ಗೌರವ ಸೂಚಿಸುತ್ತದೆ, ಮತ್ತು ಸೈನಿಕರ ಬಗ್ಗೆ ಸರ್ಕಾರ ಹೊಂದಿರುವ ಕಾಳಜಿಯನ್ನು ತೋರ್ಪಡಿಸುತ್ತದೆ ಎಂದು ಕೃತಜ್ಞತೆ ಸಲ್ಲಿಸಿದ್ದಾರೆ. ಉತ್ತರಾಖಂಡ್ ಕೆಚ್ಚೆದೆಯ ವೀರರ ಭೂಮಿ, ಈ ರಾಜ್ಯದಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

''ನಮ್ಮ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಈ ಆದೇಶ ಮತ್ತು ನೀಡುವ ಪರಿಹಾರ ಹಣ ಸೈನಿಕರ ಕುಟುಂಬಗಳಿಗೆ ನಿಜಕ್ಕೂ ಸಾಮಾಜಿಕ ಮತ್ತು ಆರ್ಥಿಕ ಬಲವನ್ನು ತುಂಬಲು ನೆರವಾಗುತ್ತದೆ. ಅಲ್ಲದೆ, ಇದು ಸೈನಿಕರ ಕಲ್ಯಾಣಕ್ಕಾಗಿ ಸರ್ಕಾರ ಹೊಂದಿರುವ ಬದ್ಧತೆಯನ್ನು ತೋರಿಸುತ್ತದೆ''ಸಚಿವ ಗಣೇಶ್ ಜೋಶಿ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

Category
ಕರಾವಳಿ ತರಂಗಿಣಿ