image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಈಶಾನ್ಯ ರಾಜ್ಯಗಳಲ್ಲಿ ಪ್ರವಾಹ: ನೆರವಿನ ಭರವಸೆ ನೀಡಿದ ಪ್ರಧಾನಿ ಮೋದಿ

ಈಶಾನ್ಯ ರಾಜ್ಯಗಳಲ್ಲಿ ಪ್ರವಾಹ: ನೆರವಿನ ಭರವಸೆ ನೀಡಿದ ಪ್ರಧಾನಿ ಮೋದಿ

ಅಸ್ಸೋಂ : ಭಾರೀ ಮಳೆ ಮತ್ತು ಪ್ರವಾಹಕ್ಕೆ ತತ್ತರಿಸಿರುವ ಈಶಾನ್ಯ ರಾಜ್ಯಗಳಿಗೆ ಕೇಂದ್ರದಿಂದ ಸಂಪೂರ್ಣ ನೆರವು ಒದಗಿಸುವುದಾಗಿ ಪ್ರಧಾನಿ ನರೆಂದ್ರ ಮೋದಿ ಅಭಯ ನೀಡಿದ್ದಾರೆ. ಅಸ್ಸೋಂ ಮುಖ್ಯಮಂತ್ರಿ ಹಿಮಂತ್​ ಬಿಸ್ವಾ ಶರ್ಮಾ ಅವರಿಗೆ ಕರೆ ಮಾಡಿದ ಪ್ರಧಾನಿ ನರೇಂದ್ರ ಮೋದಿ ಪ್ರವಾಹ ಪರಿಸ್ಥಿತಿ ಕುರಿತು ವಿವರ ಪಡೆದಿದ್ದಾರೆ. ಈ ವೇಳೆ ಅಸ್ಸೋಂ ಮತ್ತು ನೆರೆಯ ರಾಜ್ಯಗಳಲ್ಲಿ ಮಳೆ, ಪ್ರವಾಹ ಪರಿಣಾಮಗಳ ಕುರಿತು ಸಿಎಂ ಮಾಹಿತಿ ನೀಡಿದರು.

ಈ ಕುರಿತು ಎಕ್ಸ್​ ಜಾಲತಾಣದಲ್ಲಿ ಪೋಸ್ಟ್​ ಮಾಡಿರುವ ಸಿಎಂ ಶರ್ಮಾ, ಅಸ್ಸೋಂ ಪ್ರವಾಹ ಪರಿಸ್ಥಿತಿಯ ಬಗ್ಗೆ ವಿವರ ಪಡೆಯಲು ಪ್ರಧಾನಿ ನರೇಂದ್ರ ಮೋದಿ ಸ್ವಲ್ಪ ಸಮಯದ ಮುಂಚೆ ಕರೆ ಮಾಡಿ, ವಿವರಣೆ ಪಡೆದರು. ಅವರ ಈ ಬೆಂಬಲ ಮತ್ತು ಮಾರ್ಗದರ್ಶನಕ್ಕೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಪ್ರವಾಹ ಮತ್ತು ಭೂಕುಸಿತದಿಂದ ಇದುವರೆಗೆ 11 ಮಂದಿ ಸಾವನ್ನಪ್ಪಿದ್ದಾರೆ. ಆದರೆ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ 5.35 ಲಕ್ಷಕ್ಕೂ ಹೆಚ್ಚು ಜನ ಪ್ರವಾಹದಿಂದ ಸಂತ್ರಸ್ತರಾಗಿದ್ದಾರೆ. ಅಸ್ಸೋಂ ಹೊರತಾಗಿ ಈಶಾನ್ಯದ ರಾಜ್ಯಗಳು ಮಳೆ ಪ್ರವಾಹಕ್ಕೆ ಸಿಲುಕಿರುವ ಹಿನ್ನೆಲೆ ಸಿಕ್ಕೀಂ ಸಿಎಂ ಪ್ರೇಮ್ ಸಿಂಗ್ ತಮಾಂಗ್ ಮತ್ತು ಮಣಿಪುರ ರಾಜ್ಯಪಾಲ ಅಜಯ್ ಭಲ್ಲಾ ಅವರಿಗೂ ಕರೆ ಮಾಡಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಪರಿಸ್ಥಿತಿ ಕುರಿತು ಮಾಹಿತಿ ಪಡೆದರು. ಈ ವೇಳೆ ಕೇಂದ್ರದಿಂದ ಎಲ್ಲಾ ಅಗತ್ಯ ನೆರವು ನೀಡುವ ಭರವಸೆಯನ್ನು ನೀಡಿದರು.

ಈಶಾನ್ಯ ರಾಜ್ಯದ ಪ್ರವಾಹದಿಂದ ಅಸ್ಸೋಂನಲ್ಲಿ ಅತಿ ಹೆಚ್ಚು ಹಾನಿಗೊಂಡಿದ್ದು, 11 ಸಾವುಗಳು ಸಂಭವಿಸಿವೆ. ಅರುಣಾಚಲ ಪ್ರದೇಶದಲ್ಲಿ 10, ಮೇಘಾಲಯದಲ್ಲಿ ಆರು, ಮಿಜೋರಾಂನಲ್ಲಿ ಐದು, ಸಿಕ್ಕೀಂನಲ್ಲಿ ಮೂರು ಮತ್ತು ತ್ರಿಪುರಾದಲ್ಲಿ ಒಂದು ಸಾವು ಸಂಭವಿಸಿದೆ.

Category
ಕರಾವಳಿ ತರಂಗಿಣಿ