image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಸಿಎಂ ದೇವೇಂದ್ರ ಫಡ್ನವೀಸ್​ ಮತ್ತು ರಾಜ್​ ಠಾಕ್ರೆ ಭೇಟಿಯಾಗಿ ಚರ್ಚೆ

ಸಿಎಂ ದೇವೇಂದ್ರ ಫಡ್ನವೀಸ್​ ಮತ್ತು ರಾಜ್​ ಠಾಕ್ರೆ ಭೇಟಿಯಾಗಿ ಚರ್ಚೆ

ಮಹಾರಾಷ್ಟ್ರ : ಶಿವಸೇನೆ (ಯುಬಿಟಿ) ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್​ಎಸ್​) ಮೈತ್ರಿ ಮಾಡಿಕೊಳ್ಳಲಿವೆ ಎಂಬ ಸುದ್ದಿ ನಡುವೆಯೇ ಇಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​ ಅವರು​ ಎಂಎನ್​ಎಸ್​ ಮುಖ್ಯಸ್ಥ ರಾಜ್​ ಠಾಕ್ರೆ ಅವರನ್ನು ಹೋಟೆಲ್​ನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬಾಂದ್ರಾ ಪ್ರದೇಶದ ಪಂಚತಾರಾ ಹೋಟೆಲ್‌ನಲ್ಲಿ ಸಿಎಂ ಫಡ್ನವೀಸ್​ ಮತ್ತು ರಾಜ್​ ಠಾಕ್ರೆ ಭೇಟಿಯಾಗಿದ್ದು, ಈ ಬೆಳವಣಿಗೆಗಳ ಕುರಿತು ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇನ್ನು, ಈ ಕುರಿತು ಬಿಜೆಪಿ ಮುಖ್ಯ ವಕ್ತಾರ ಕೇಶವ್​ ಉಪಾಧ್ಯೆ ಅವರನ್ನು ಸಂಪರ್ಕಿಸಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಅವರು, ಇಬ್ಬರು ನಾಯಕರು ಉತ್ತಮ ಸ್ನೇಹಿತರು ಮತ್ತು ರಾಜ್ಯಕ್ಕೆ ಸಂಬಂಧಿಸಿದ ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚಿಸಲು ಭೇಟಿಯಾಗಿರಬಹುದು ಎಂದು ಹೇಳಿದ್ದಾರೆ. ಸದ್ಯ ಮಹಾರಾಷ್ಟ್ರದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಎದುರಾಗುತ್ತಿವೆ. ಸರ್ಕಾರ ಈ ವಾರ ಮುಂಬೈ ಸೇರಿದಂತೆ 29 ಮಹಾನಗರ ಪಾಲಿಕೆಗಳಿಗೆ ವಾರ್ಡ್ ವಿಂಗಡಣೆಗೆ ಆದೇಶ ನೀಡಿದ್ದು, ಈ ಮೂಲಕ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸುವ ಪ್ರಕ್ರಿಯೆ ಪ್ರಾರಂಭವಾಗಿದೆ.

ಈ ಚುನಾವಣೆಗೂ ಮುನ್ನ ಠಾಕ್ರೆ ಸಹೋದರರ ನಡುವೆ ಹೊಂದಾಣಿಕೆಯಾಗುವ ಸಾಧ್ಯತೆಯ ಬಗ್ಗೆ ಊಹಾಪೋಹಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.

Category
ಕರಾವಳಿ ತರಂಗಿಣಿ