image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿಂದ ಇಸ್ರೇಲ್-ಇರಾನ್ ನಡುವೆ ಕದನ ವಿರಾಮ ಘೋಷಣೆ?

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿಂದ ಇಸ್ರೇಲ್-ಇರಾನ್ ನಡುವೆ ಕದನ ವಿರಾಮ ಘೋಷಣೆ?

ಅಮೇರಿಕ : ತನ್ನ ಪರಮಾಣು ಸ್ಥಾವರಗಳ ಮೇಲೆ ಬಿ2 ಬಾಂಬರ್‌ಗಳ ಮೂಲಕ ದಾಳಿ ನಡೆಸಿದ ಅಮೆರಿಕದ ವಿರುದ್ಧ ಇರಾನ್ ಪ್ರತೀಕಾರ ತೀರಿಸಿಕೊಳ್ಳುತ್ತಿದೆ. ನಿನ್ನೆ ಕತಾರ್ ಮತ್ತು ಇರಾಕ್‌ನಲ್ಲಿರುವ ಅಮೆರಿಕದ ಸೇನಾನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಈ ಮೂಲಕ ಇಸ್ರೇಲ್-ಇರಾನ್ ನಡುವಿನ ಯುದ್ಧ ಮಧ್ಯ ಪ್ರಾಚ್ಯದಾದ್ಯಂತ ಹರಡುವ ಆತಂಕದ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, 'ಕದನ ವಿರಾಮ' ಘೋಷಣೆ ಮಾಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಟ್ರೂತ್‌ನಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, ಇರಾನ್ ಮತ್ತು ಇಸ್ರೇಲ್ ದೇಶಗಳು ಸಂಪೂರ್ಣ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಇದು ಮುಂದಿನ 24 ಗಂಟೆಗಳಲ್ಲಿ ಹಂತಹಂತವಾಗಿ ಜಾರಿಗೆ ಬರಲಿದೆ ಎಂದು ಅವರು ತಿಳಿಸಿದ್ದಾರೆ. ಟ್ರಂಪ್ ಪ್ರಕಾರ, ಇರಾನ್ ಮೊದಲು ಕದನ ನಿಲ್ಲಿಸಲಿದ್ದು, ನಂತರ ಮುಂದಿನ 24 ಗಂಟೆಗಳಲ್ಲಿ ಇಸ್ರೇಲ್ ದಾಳಿ ನಿಲ್ಲಿಸುತ್ತದೆ. ಇಸ್ರೇಲ್ ವೈಮಾನಿಕ ದಾಳಿ ನಿಲ್ಲಿಸಿದರೆ ಇರಾನ್ ತನ್ನ ದಾಳಿಯನ್ನು ನಿಲ್ಲಿಸುತ್ತದೆ ಎಂದು ಇರಾನ್ ವಿದೇಶಾಂಗ ಸಚಿವರು ಹೇಳಿದ್ದಾರೆ ಎಂದು ವರದಿಯಾಗಿದೆ. ಟ್ರಂಪ್ ಕದನ ವಿರಾಮ ಘೋಷಿಸಿದ ಕೆಲವೇ ಕ್ಷಣಗಳಲ್ಲಿ ಇಸ್ರೇಲಿ ಸೇನೆಯು ಇರಾನ್‌ನ ಹಲವು ಸ್ಥಳಗಳ ಮೇಲೆ ದಾಳಿ ಮಾಡಿತು ಎಂದು ಇರಾನ್ ಮಾಧ್ಯಮ ಸಂಸ್ಥೆಗಳು ವರದಿ ಮಾಡಿವೆ.

Category
ಕರಾವಳಿ ತರಂಗಿಣಿ