image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ತುರ್ತು ಪರಿಸ್ಥಿತಿ ಹೇರಿಕೆಯನ್ನು ಭಾರತ ಪ್ರಜಾಪ್ರಭುತ್ವ ಇತಿಹಾಸದ ಕರಾಳ ದಿನ ಎಂದು ಬಣ್ಣಿಸಿದ ಪ್ರಧಾನಿ ಮೋದಿ

ತುರ್ತು ಪರಿಸ್ಥಿತಿ ಹೇರಿಕೆಯನ್ನು ಭಾರತ ಪ್ರಜಾಪ್ರಭುತ್ವ ಇತಿಹಾಸದ ಕರಾಳ ದಿನ ಎಂದು ಬಣ್ಣಿಸಿದ ಪ್ರಧಾನಿ ಮೋದಿ

ನವದೆಹಲಿ: ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಸಂವಿಧಾನದ ಆಶಯಗಳ ಉಲ್ಲಂಘನೆಯನ್ನು ಯಾವುದೇ ಭಾರತೀಯನೂ ಮರೆಯಲಾರ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಇದೇ ವೇಳೆ ನಮ್ಮ ಸರ್ಕಾರ ಸಂವಿಧಾನದ ತತ್ವಗಳನ್ನು ಬಲಗೊಳಿಸಲು ಬದ್ದ ಎಂದು ಭರವಸೆ ನೀಡಿದ್ದಾರೆ. ತುರ್ತು ಪರಿಸ್ಥಿತಿಯ 50ನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಸರಣಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಇದೊಂದು ಕರಾಳ ಅಧ್ಯಾಯ ಎಂದು ಬಣ್ಣಿಸಿದ್ದಾರೆ.

ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಸಂವಿಧಾನದ ಮೌಲ್ಯಗಳನ್ನು ಬದಿಗಿಡಲಾಯಿತು. ಮೂಲಭೂತ ಹಕ್ಕುಗಳನ್ನು ಅಮಾನತುಗೊಳಿಸಲಾಯಿತು. ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕಲಾಯಿತು. ಅನೇಕ ರಾಜಕೀಯ ನಾಯಕರು, ಸಾಮಾಜಿಕ ಕಾರ್ಯಕರ್ತರು, ವಿದ್ಯಾರ್ಥಿಗಳು ಮತ್ತು ಸಾಮಾನ್ಯ ನಾಗರಿಕರನ್ನು ಜೈಲಿಗೆ ಹಾಕಲಾಯಿತು. ಆ ಸಮಯದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವವನ್ನು ಬಂಧನದಲ್ಲಿಟ್ಟಿತು ಎಂದು ತಿಳಿಸಿದ್ದಾರೆ. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಹೋರಾಟದಲ್ಲಿ ಭಾಗಿಯಾದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸುತ್ತೇನೆ. ದೇಶಾದ್ಯಂತ ಎಲ್ಲಾ ಹಂತದಲ್ಲಿ ವೈವಿಧ್ಯಮಯ ಸಿದ್ಧಾಂತಗಳೊಂದಿಗೆ ಒಂದೇ ಗುರಿಗಾಗಿ ಜನರು ಕೆಲಸ ಮಾಡಿದ್ದು, ಭಾರತದ ಪ್ರಜಾಪ್ರಭುತ್ವವನ್ನು ಕಾಪಾಡಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ ಆದರ್ಶವನ್ನು ರಕ್ಷಿಸಿದ್ದಾರೆ ಎಂದಿದ್ದಾರೆ.

ಆ ಸಂದರ್ಭದಲ್ಲಿನ ಸಾಮೂಹಿಕ ಹೋರಾಟವೇ ಆಗಿನ ಕಾಂಗ್ರೆಸ್ ಸರ್ಕಾರದ ಸೋಲು ಹಾಗೂ ಪ್ರಜಾಪ್ರಭುತ್ವವನ್ನು ಪುನಃಸ್ಥಾಪಿಸಲು ಮತ್ತು ಹೊಸ ಚುನಾವಣೆಗಳನ್ನು ನಡೆಸಲು ಕಾರಣವಾಯಿತು ಎಂದು ಮೋದಿ ತಿಳಿಸಿದ್ದಾರೆ. ಕಳೆದ ವರ್ಷದಿಂದ ಈ ತುರ್ತು ಪರಿಸ್ಥಿತಿಯ ವಾರ್ಷಿಕೋತ್ಸವವನ್ನು 'ಸಂವಿಧಾನ ಹತ್ಯಾ ದಿವಸ್'​ ಆಗಿ ಆಚರಿಸಲಾಗುವುದು ಎಂದು ಪ್ರಧಾನಿ ಮೋದಿ ತಿಳಿಸಿದ್ದರು.

Category
ಕರಾವಳಿ ತರಂಗಿಣಿ