image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಹಿಂದಿಯನ್ನು ಮೂರನೇ ಭಾಷೆಯಾಗಿ ಕಡ್ಡಾಯವಾಗಿ ಕಲಿಸಲು ಸೂಚಿಸುವ ತ್ರಿಭಾಷಾ ಸೂತ್ರಕ್ಕೆ ಮಹಾರಾಷ್ಟ್ರದಲ್ಲಿ ಹಿನ್ನಡೆ

ಹಿಂದಿಯನ್ನು ಮೂರನೇ ಭಾಷೆಯಾಗಿ ಕಡ್ಡಾಯವಾಗಿ ಕಲಿಸಲು ಸೂಚಿಸುವ ತ್ರಿಭಾಷಾ ಸೂತ್ರಕ್ಕೆ ಮಹಾರಾಷ್ಟ್ರದಲ್ಲಿ ಹಿನ್ನಡೆ

ಮಹಾರಾಷ್ಟ್ರ : ಹಿಂದಿಯನ್ನು ಮೂರನೇ ಭಾಷೆಯಾಗಿ ಕಡ್ಡಾಯವಾಗಿ ಕಲಿಸಲು ಸೂಚಿಸುವ ತ್ರಿಭಾಷಾ ಸೂತ್ರಕ್ಕೆ ಮಹಾರಾಷ್ಟ್ರದಲ್ಲಿ ಹಿನ್ನಡೆಯಾಗಿದೆ. ರಾಜ್ಯದ ಶಾಲೆಗಳಲ್ಲಿ 1 ರಿಂದ 5ನೇ ತರಗತಿ ಮಕ್ಕಳಿಗೆ ಹಿಂದಿ ಕಲಿಸಬೇಕು ಎಂಬ ಆದೇಶಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಇದೀಗ ಸರ್ಕಾರ ತನ್ನ ಆದೇಶವನ್ನೇ ವಾಪಸ್​ ಪಡೆದಿದೆ. ಈ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಭಾಷಾ ನೀತಿಯ ಮುಂದಿನ ಬೆಳವಣಿಗೆ ಮತ್ತು ಅನುಷ್ಠಾನವನ್ನು ನಿರ್ಧರಿಸಲು ಶಿಕ್ಷಣ ತಜ್ಞ ನರೇಂದ್ರ ಜಾಧವ್ ಅವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸುವುದಾಗಿ ಘೋಷಿಸಿದರು.

"ತ್ರಿಭಾಷಾ ನೀತಿಯಡಿ ಒಂದನೇ ತರಗತಿಯಿಂದಲೇ ಹಿಂದಿ ಕಲಿಸಬೇಕು ಎಂದು ಏಪ್ರಿಲ್ ಮತ್ತು ಜೂನ್‌ನಲ್ಲಿ ಹೊರಡಿಸಲಾದ ಎರಡು ಸರ್ಕಾರಿ ಆದೇಶಗಳನ್ನು ಹಿಂತೆಗೆದುಕೊಳ್ಳಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ ಎಂದು ಫಡ್ನವೀಸ್ ಹೇಳಿದರು. ಹಿಂದಿ ಭಾಷೆಯನ್ನು ಹೇರಲಾಗುತ್ತಿದೆ ಎಂದು ತೀವ್ರ ಹೋರಾಟ ನಡೆಸುತ್ತಿರುವ ಶಿವಸೇನೆಯ ಉದ್ಧವ್​ ಠಾಕ್ರೆ ಅವರು, ಈ ಹಿಂದೆ ಸಿಎಂ ಆಗಿದ್ದಾಗ ಅವರೇ 1 ರಿಂದ 12 ನೇ ತರಗತಿಯವರೆಗೆ ತ್ರಿಭಾಷಾ ನೀತಿ ಅನುಷ್ಠಾನಕ್ಕೆ ಮುಂದಾಗಿದ್ದರು. ಡಾ. ರಘುನಾಥ್ ಮಶೇಲ್ಕರ್ ಸಮಿತಿ ಮಾಡಿದ್ದ ಶಿಫಾರಸುಗಳನ್ನು ಉದ್ಧವ್ ಠಾಕ್ರೆ ಅಂಗೀಕರಿಸಿದ್ದರು ಎಂದು ಫಡ್ನವೀಸ್ ಆರೋಪಿಸಿದ್ದಾರೆ. ಫಡ್ನವೀಸ್ ನೇತೃತ್ವದ ರಾಜ್ಯ ಸರ್ಕಾರ ಏಪ್ರಿಲ್ 16 ರಂದು ಇಂಗ್ಲಿಷ್ ಮತ್ತು ಮರಾಠಿ ಮಾಧ್ಯಮ ಶಾಲೆಗಳಲ್ಲಿ ಓದುತ್ತಿರುವ 1 ರಿಂದ 5 ನೇ ತರಗತಿಯ ವಿದ್ಯಾರ್ಥಿಗಳಿಗೆ ಹಿಂದಿಯನ್ನು ಕಡ್ಡಾಯ ಮೂರನೇ ಭಾಷೆಯನ್ನಾಗಿ ಕಲಿಸಬೇಕು ಎಂದು ಆದೇಶ ಹೊರಡಿಸಿತ್ತು. ಇದಕ್ಕೆ ವಿರೋಧ ಉಂಟಾದ ಬಳಿಕ, ಜೂನ್ 17 ರಂದು ಆದೇಶ ತಿದ್ದುಪಡಿ ಮಾಡಿ ಹಿಂದಿಯನ್ನು ಐಚ್ಛಿಕ ಭಾಷೆಯನ್ನಾಗಿ ಮಾಡಿತು.

Category
ಕರಾವಳಿ ತರಂಗಿಣಿ