image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಲಲಿತ್ ಮೋದಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

ಲಲಿತ್ ಮೋದಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

ನವದೆಹಲಿ: ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA) ಉಲ್ಲಂಘಿಸಿದ್ದಕ್ಕಾಗಿ ಜಾರಿ ನಿರ್ದೇಶನಾಲಯ (ED) ವಿಧಿಸಿರುವ 10.65 ಕೋಟಿ ರೂ. ದಂಡ ಪಾವತಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI)ಗೆ ನಿರ್ದೇಶನ ನೀಡಬೇಕು ಎಂದು ಕೋರಿ ಮಾಜಿ ಕ್ರಿಕೆಟ್ ಆಡಳಿತಾಧಿಕಾರಿ ಮತ್ತು ಐಪಿಎಲ್​ ಸಂಸ್ಥಾಪಕ ಲಲಿತ್ ಮೋದಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಸೋಮವಾರ ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಆರ್. ಮಹಾದೇವನ್ ಅವರನ್ನೊಳಗೊಂಡ ಪೀಠ, ಲಲಿತ್ ಮೋದಿ ಅವರ ಮನವಿ ಪರಿಗಣಿಸಲು ನಿರಾಕರಿಸಿ, ಕಾನೂನಿನ ಪ್ರಕಾರ ಲಭ್ಯವಿರುವ ನಾಗರಿಕ ಪರಿಹಾರಗಳನ್ನು ಪಡೆಯಲು ಅವರು ಅರ್ಹರು ಎಂದು ಹೇಳಿತು.

2024ರ ಡಿಸೆಂಬರ್​ನಲ್ಲಿ ಫೆಮಾ ಉಲ್ಲಂಘಿಸಿದ್ದಕ್ಕಾಗಿ ಇಡಿ ವಿಧಿಸಿರುವ 10.65 ಕೋಟಿ ದಂಡ ಪಾವತಿಸಲು ಬಿಸಿಸಿಐಗೆ ನಿರ್ದೇಶನ ನೀಡುವಂತೆ ಕೋರಿ ಲಲಿತ್ ಮೋದಿ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ವಜಾಗೊಳಿಸಿ, 1 ಲಕ್ಷ ದಂಡ ವಿಧಿಸಿತ್ತು. ಲಲಿತ್ ಮೋದಿ ಅವರು ಕ್ಷುಲ್ಲಕ ಮತ್ತು ಸಂಪೂರ್ಣವಾಗಿ ತಪ್ಪು ಕಲ್ಪನೆ‌ಯಿಂದ ಅರ್ಜಿ ಸಲ್ಲಿಸಿದ್ದಾರೆ ಎಂದು ಹೈಕೋರ್ಟ್ ಹೇಳಿತ್ತು. ಮೋದಿ ಅವರನ್ನು ಬಿಸಿಸಿಐ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಆ ಅವಧಿಯಲ್ಲಿ ಅವರು ಬಿಸಿಸಿಐ ಉಪ ಸಮಿತಿಯಾದ ಇಂಡಿಯನ್ ಪ್ರೀಮಿಯರ್ ಲೀಗ್ ಆಡಳಿತ ಮಂಡಳಿಯ ಅಧ್ಯಕ್ಷರೂ ಆಗಿದ್ದರು. ಬೈಲಾಗಳ ಪ್ರಕಾರ ಬಿಸಿಸಿಐ ತನಗೆ ಪರಿಹಾರ ನೀಡಬೇಕೆಂದು ಮೋದಿ ತಮ್ಮ ಅರ್ಜಿಯಲ್ಲಿ ವಾದಿಸಿದ್ದರು. ಜಾರಿ ನಿರ್ದೇಶನಾಲಯ ವಿಧಿಸಿದ ದಂಡದ ಸಂದರ್ಭದಲ್ಲಿ ಅರ್ಜಿದಾರರಿಗೆ (ಮೋದಿ) ಪರಿಹಾರ ನೀಡಲಾಗುತ್ತಿದೆ ಎಂಬ ಆರೋಪದ ವಿಷಯಗಳಲ್ಲಿ ಆದ್ದರಿಂದ ಬಿಸಿಸಿಐಗೆ ಯಾವುದೇ ರಿಟ್ ಹೊರಡಿಸಲಾಗುವುದಿಲ್ಲ ಎಂದು ಹೈಕೋರ್ಟ್ ತಿಳಿಸಿತ್ತು.

Category
ಕರಾವಳಿ ತರಂಗಿಣಿ