image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಭಾರತೀಯ ರಿಸರ್ವ್ ಬ್ಯಾಂಕ್ ಕೇಶವನ್ ರಾಮಚಂದ್ರನ್ ಅವರನ್ನು RBI ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ನೇಮಕ

ಭಾರತೀಯ ರಿಸರ್ವ್ ಬ್ಯಾಂಕ್ ಕೇಶವನ್ ರಾಮಚಂದ್ರನ್ ಅವರನ್ನು RBI ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ನೇಮಕ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಜುಲೈ 1 ರಿಂದ ಜಾರಿಗೆ ಬರುವಂತೆ ಕೇಶವನ್ ರಾಮಚಂದ್ರನ್ ಅವರನ್ನು RBI ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ನೇಮಕ ಮಾಡಿದೆ. ಕಾರ್ಯನಿರ್ವಾಹಕ ನಿರ್ದೇಶಕರಾಗಿ ನೇಮಕಗೊಂಡಿರುವ ಕೇಶವನ್ ರಾಮಚಂದ್ರನ್ ಪ್ರುಡೆನ್ಶಿಯಲ್ ನಿಯಂತ್ರಣ ವಿಭಾಗ ನೋಡಿಕೊಳ್ಳುತ್ತಾರೆ ಎಂದು ಕೇಂದ್ರ ಬ್ಯಾಂಕ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಕಾರ್ಯನಿರ್ವಾಹಕ ನಿರ್ದೇಶಕರಾಗಿ ಬಡ್ತಿ ಪಡೆಯುವ ಮೊದಲು ಕೇಶವನ್ ರಾಮಚಂದ್ರನ್ ಅಪಾಯ ನಿಗಾ ವಿಭಾಗದಲ್ಲಿ ಪ್ರಧಾನ ಮುಖ್ಯ ಜನರಲ್ ಮ್ಯಾನೇಜರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ರಾಮಚಂದ್ರನ್ ಕರೆನ್ಸಿ ನಿರ್ವಹಣೆ, ಬ್ಯಾಂಕಿಂಗ್ ಮತ್ತು ಬ್ಯಾಂಕೇತರ ಮೇಲ್ವಿಚಾರಣೆ, ತರಬೇತಿ ಮತ್ತು ಆಡಳಿತಕ್ಕೆ ಸಂಬಂಧಿಸಿದ ಕ್ಷೇತ್ರಗಳಲ್ಲಿ ಮೂರು ದಶಕಗಳಿಗೂ ಹೆಚ್ಚು ಅನುಭವ ಹೊಂದಿದ್ದಾರೆ.

ಅವರು ತಮ್ಮ ವೃತ್ತಿಜೀವನದಲ್ಲಿ ರಿಸರ್ವ್ ಬ್ಯಾಂಕ್ ಸ್ಟಾಫ್ ಕಾಲೇಜಿನ ಪ್ರಾಂಶುಪಾಲರಾಗಿಯೂ ಸೇವೆ ಸಲ್ಲಿಸಿದ್ದರು. ಅವರು ಐದು ವರ್ಷಗಳಿಗೂ ಹೆಚ್ಚು ಕಾಲ ಕೆನರಾ ಬ್ಯಾಂಕಿನ ಮಂಡಳಿಯಲ್ಲಿ ಮತ್ತು ಎರಡು ವರ್ಷಗಳ ಕಾಲ ICAI ನ ಆಡಿಟಿಂಗ್ ಮತ್ತು ಅಶ್ಯೂರೆನ್ಸ್ ಸ್ಟ್ಯಾಂಡರ್ಡ್ಸ್ ಬೋರ್ಡ್‌ನಲ್ಲಿ RBI ನಾಮನಿರ್ದೇಶಿತರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ರಾಮಚಂದ್ರನ್ ಬ್ಯಾಂಕಿಂಗ್ ಮತ್ತು ಹಣಕಾಸಿನಲ್ಲಿ ಸ್ನಾತಕೋತ್ತರ ಪದವಿ ಮತ್ತು MBA ಪದವಿ ಪಡೆದಿದ್ದಾರೆ. ಅವರು UK ಯ ACCA ಯಿಂದ ಅಂತಾರಾಷ್ಟ್ರೀಯ ಹಣಕಾಸು ವರದಿಯಲ್ಲಿ ಡಿಪ್ಲೊಮಾ ಕೂಡಾ ಮಾಡಿದ್ದಾರೆ. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಮತ್ತು ಫೈನಾನ್ಸ್ (IIBF) ನ ಪ್ರಮಾಣೀಕೃತ ಸಹವರ್ತಿಯಾಗಿದ್ದಾರೆ.

Category
ಕರಾವಳಿ ತರಂಗಿಣಿ