ನವದೆಹಲಿ: ಜಮ್ಮು- ಕಾಶ್ಮೀರ ವಿಧಾನಸಭೆ ಚುನಾವಣೆ ಪ್ರಚಾರ ನಡೆಸುತ್ತಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಭಾಷಣದ ವೇಳೆ ಅಸ್ವಸ್ಥರಾದ ಘಟನೆ ನಡೆದಿತ್ತು. ಇದರ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಹಿರಿಯ ನಾಯಕನಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಜಸ್ರೋಟಾ ಬೆಲ್ಟ್‌ನಲ್ಲಿ ಭಾನುವಾರ ಸಾರ್ವಜನಿಕ ಸಬೆಯನ್ನುದ್ದೇಶಿಸಿ ಮಾತನಾಡುವಾಗ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಸ್ವಸ್ಥರಾದರು. ತಕ್ಷಣವೇ ವೇದಿಕೆ ಮೇಲಿದ್ದವರು ಕೈ ಹಿಡಿದುಕೊಂಡು ಆರೈಕೆ ಮಾಡಿದರು.
ಚುನಾವಣಾ ಪ್ರಚಾರದ ವೇಳೆ ಖರ್ಗೆ ಅವರ ಅಸ್ವಸ್ಥರಾದ ಬಗ್ಗೆ ಪುತ್ರ, ಕರ್ನಾಟಕ ಸರ್ಕಾರದ ಮಾಹಿತಿ ತಂತ್ರಜ್ಞಾನ ಸಚಿವರೂ ಆಗಿರುವ ಪ್ರಿಯಾಂಕ್ ಖರ್ಗೆ ಅವರು ಸ್ಪಷ್ಟನೆ ನೀಡಿದ್ದಾರೆ.ಜಮ್ಮು- ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ ಪ್ರಚಾರದ ವೇಳೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರು ಅಸ್ವಸ್ಥರಾಗಿದ್ದರು. ಸದ್ಯ ಅವರು ಚೇತರಿಸಿಕೊಂಡು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.