image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ತಿರುಪತಿ ಲಡ್ಡು ಕಲಬೆರಕೆ ಪ್ರಕರಣವನ್ನು ಸುಪ್ರೀಂ ಕೋರ್ಟ್​ ವಿಚಾರಣೆಗೆ ಕೈಗೆತ್ತಿಕೊಂಡ ಹಿನ್ನೆಲೆ, ಎಸ್​​ಐಟಿ ತನಿಖೆ ರದ್ದು.

ತಿರುಪತಿ ಲಡ್ಡು ಕಲಬೆರಕೆ ಪ್ರಕರಣವನ್ನು ಸುಪ್ರೀಂ ಕೋರ್ಟ್​ ವಿಚಾರಣೆಗೆ ಕೈಗೆತ್ತಿಕೊಂಡ ಹಿನ್ನೆಲೆ, ಎಸ್​​ಐಟಿ ತನಿಖೆ ರದ್ದು.

ಆಂಧ್ರ ಪ್ರದೇಶ : ತಿರುಪತಿ ಲಡ್ಡು ಕಲಬೆರಕೆ ಪ್ರಕರಣವನ್ನು ಸುಪ್ರೀಂ ಕೋರ್ಟ್​ ವಿಚಾರಣೆ ನಡೆಸುತ್ತಿದೆ. ಹೀಗಾಗಿ, ಪ್ರಕರಣದ ತನಿಖೆ ನಡೆಸಲು ಆಂಧ್ರ ಪ್ರದೇಶ ರಾಜ್ಯ ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡ (ಎಸ್‌ಐಟಿ) ತನ್ನ ಚಟುವಟಿಕೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಿದೆ.

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಆಂಧ್ರ ಪ್ರದೇಶ ಡಿಜಿಪಿ ಸಿ.ಎಚ್.ದ್ವಾರಕಾ ತಿರುಮಲರಾವ್, "ತಿರುಪತಿ ಲಡ್ಡು ಕಲಬೆರಕೆ ಪ್ರಕರಣ ಈಗ ಸುಪ್ರೀಂ ಕೋರ್ಟ್​ ಅಂಗಳದಲ್ಲಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಕೋರ್ಟ್​ ಸೋಮವಾರ ವಿಚಾರಣೆ ನಡೆಸಿದೆ. ಹೀಗಾಗಿ ಪ್ರಕರಣದ ವಿಚಾರಣೆ ನಡೆಸಲು ಸರ್ಕಾರ ರಚಿಸಿದ್ದ ಎಸ್​​ಐಟಿ ತನಿಖೆಯನ್ನು ಸ್ಥಗಿತಗೊಳಿಸಿದೆ" ಎಂದರು.

ತನಿಖೆಯ ಭಾಗವಾಗಿ ಎಸ್​​ಐಟಿ ಲಡ್ಡುವಿಗೆ ಬಳಸಲಾಗುವ ತುಪ್ಪ ಮತ್ತಿತರ ಪದಾರ್ಥಗಳ ಮಾದರಿಗಳನ್ನು ಸಂಗ್ರಹಿಸಿತ್ತು. ಲಡ್ಡುಗಳನ್ನು ಕಲಬೆರಕೆ ಮಾಡಲು ಹೇಗೆ ಸಾಧ್ಯ? ಎಂಬುದನ್ನು ವಿಚಾರಣೆ ನಡೆಸಿತ್ತು. ಈ ಎಲ್ಲ ವಿದ್ಯಮಾನಗಳ ಮಧ್ಯೆ ಸುಪ್ರೀಂ ಕೋರ್ಟ್​ ಪ್ರಕರಣದ ವಿಚಾರಣೆ ಆರಂಭಿಸಿದೆ. ಹೀಗಾಗಿ ಕೇಸ್​ನ ತನಿಖೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ" ಎಂದು ಮಾಹಿತಿ ನೀಡಿದರು.

"ಸುಪ್ರೀಂ ಕೋರ್ಟ್‌ನ ವ್ಯಾಪ್ತಿಯಲ್ಲಿ ಪ್ರಕರಣದ ಪರಿಶೀಲನೆ ನಡೆಯುತ್ತಿರುವಾಗ, ಈ ಬಗ್ಗೆ ಹೆಚ್ಚು ಮಾಹಿತಿ ಹಂಚಿಕೊಳ್ಳುವುದು ಸೂಕ್ತವಲ್ಲ. ಅಕ್ಟೋಬರ್ 3ರಂದು ಕೋರ್ಟ್‌ನಲ್ಲಿ ಪ್ರಕರಣದ ಮುಂದಿನ ವಿಚಾರಣೆ ನಡೆಯಲಿದೆ. ನಂತರದ ಬೆಳವಣಿಗೆಯ ಆಧಾರದ ಮೇಲೆ ಎಸ್​ಐಟಿ ಕ್ರಮ ಕೈಗೊಳ್ಳಲಿದೆ" ಎಂದು ತಿಳಿಸಿದರು.

Category
ಕರಾವಳಿ ತರಂಗಿಣಿ