image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಹೆಲಿಕಾಪ್ಟರ್ ಪತನವಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ.

ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಹೆಲಿಕಾಪ್ಟರ್ ಪತನವಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ.

ಮಹಾರಾಷ್ಟ್ರ : ಪುಣೆಯ ಬವ್ಧಾನ್ ಗುಡ್ಡಗಾಡು ಪ್ರದೇಶದಲ್ಲಿ ಖಾಸಗಿ ಹೆಲಿಕಾಪ್ಟರ್ ಪತನಗೊಂಡಿದೆ. ಈ ಅವಘಡದಲ್ಲಿ ಓರ್ವ ಇಂಜಿನಿಯರ್ ಹಾಗೂ ಇಬ್ಬರು ಪೈಲಟ್​ಗಳು ಸಾವನ್ನಪ್ಪಿದ್ದಾರೆ. ಪೊಲೀಸರು, ಇತರ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಪುಣೆ ನಗರ ಪ್ರದೇಶದಲ್ಲಿ ಮಂಜು ಕವಿದಿದ್ದು, ಈ ಹಿನ್ನೆಲೆ ಹೆಲಿಕಾಪ್ಟರ್ ಪತನಗೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆಕ್ಸ್‌ಫರ್ಡ್ ಗಾಲ್ಫ್ ಕ್ಲಬ್‌ನಲ್ಲಿರುವ ಹೆಲಿಪ್ಯಾಡ್‌ನಿಂದ ಟೇಕಾಫ್ ಆದ ನಂತರ ಹೆಲಿಕಾಪ್ಟರ್ ಪತನಗೊಂಡಿದೆ. ಬೆಳಗ್ಗೆ 6.45ರ ಸುಮಾರಿಗೆ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದ ನಂತರ ಹೆಲಿಕಾಪ್ಟರ್‌ಗೆ ಬೆಂಕಿ ಹೊತ್ತಿಕೊಂಡಿದೆ. ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ದೆಹಲಿ ಮೂಲದ ಖಾಸಗಿ ವಿಮಾನಯಾನ ಸಂಸ್ಥೆಗೆ ಸೇರಿದ ಹೆಲಿಕಾಪ್ಟರ್ ಇದಾಗಿದೆ. ಆಕ್ಸ್‌ಫರ್ಡ್ ಗಾಲ್ಫ್ ಕೋರ್ಸ್ ಹೆಲಿಪ್ಯಾಡ್‌ನಿಂದ ಹೊರಟು ಮುಂಬೈನ ಜುಹುಗೆ ತೆರಳುತ್ತಿತ್ತು ಎಂದು ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. "ಹೆಲಿಕಾಪ್ಟರ್ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಗ್ನಿಶಾಮಕ ಇಲಾಖೆ ವಾಹನಗಳೊಂದಿಗೆ ಪೊಲೀಸ್​ ತಂಡಗಳು ಸ್ಥಳಕ್ಕೆ ತಲುಪಿವೆ" ಎಂದು ಪಿಂಪ್ರಿ ಚಿಂಚ್‌ವಾಡ್ ಪೊಲೀಸ್ ಕಮಿಷನರ್ ವಿನಯ್ ಕುಮಾರ್ ಚೌಬೆ ಮಾಹಿತಿ ನೀಡಿದ್ದಾರೆ.

Category
ಕರಾವಳಿ ತರಂಗಿಣಿ