image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಛತ್ತೀಸ್‌ಗಢದಲ್ಲಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ 30 ನಕ್ಸಲರು ಹತ

ಛತ್ತೀಸ್‌ಗಢದಲ್ಲಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ 30 ನಕ್ಸಲರು ಹತ

ದಂತೇವಾಡ : ಛತ್ತೀಸ್‌ಗಢದ ನಾರಾಯಣಪುರ ಮತ್ತು ದಂತೇವಾಡ ಗಡಿ ಪ್ರದೇಶಗಳಲ್ಲಿ ಇಂದು ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಕನಿಷ್ಠ 30 ಮಂದಿ ನಕ್ಸಲರು ಸಾವನ್ನಪ್ಪಿದ್ದಾರೆ.

ಭದ್ರತಾ ಪಡೆಗಳು ಅಬುಜ್ಮದ್ ಅರಣ್ಯದಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ ನಕ್ಸಲರು ಅಡಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಜಾಡು ಹಿಡಿದು ಮುಂದೆ ಸಾಗುತ್ತಿದ್ದಂತೆ ನಕ್ಸಲರು ಗುಂಡಿನ ದಾಳಿ ಆರಂಭಿಸಿದ್ದಾರೆ. ಇದಕ್ಕುತ್ತರವಾಗಿ ಭದ್ರತಾ ಸಿಬ್ಬಂದಿ ಪ್ರತಿದಾಳಿ ನಡೆಸಿದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಎಕೆ-47, ಎಸ್‌ಎಲ್‌ಆರ್ ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಸದ್ಯ ಈ ಪ್ರದೇಶಗಳಲ್ಲಿ ಶೋಧಕಾರ್ಯ ಮುಂದುವರೆದಿದೆ.

ಈ ವರ್ಷ ಬಸ್ತಾರ್‌ ಪ್ರದೇಶದ ಏಳು ಜಿಲ್ಲೆಗಳಲ್ಲಿ ನಡೆದ ಎನ್‌ಕೌಂಟರ್‌ಗಳಲ್ಲಿ ಭದ್ರತಾ ಪಡೆಗಳು ಇದುವರೆಗೆ 164ಕ್ಕೂ ಹೆಚ್ಚು ನಕ್ಸಲರನ್ನು ಹೊಡೆದುರುಳಿಸಿವೆ.

Category
ಕರಾವಳಿ ತರಂಗಿಣಿ