image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಶಾಂಘೈ ಸಹಕಾರ ಸಮಾವೇಶಕ್ಕಾಗಿ ವಿದೇಶಾಂಗ ಸಚಿವ ಎಸ್.ಜೈಶಂಕರ್ ಪಾಕಿಸ್ತಾನಕ್ಕೆ ಪ್ರಯಾಣ

ಶಾಂಘೈ ಸಹಕಾರ ಸಮಾವೇಶಕ್ಕಾಗಿ ವಿದೇಶಾಂಗ ಸಚಿವ ಎಸ್.ಜೈಶಂಕರ್ ಪಾಕಿಸ್ತಾನಕ್ಕೆ ಪ್ರಯಾಣ

ನವದೆಹಲಿ: ಶಾಂಘೈ ಸಹಕಾರ ಸಂಘಟನೆ (ಎಸ್​ಸಿಒ) ಸಮಾವೇಶದಲ್ಲಿ ಭಾಗವಹಿಸಲು ವಿದೇಶಾಂಗ ಸಚಿವ ಎಸ್.ಜೈಶಂಕರ್ ಪಾಕಿಸ್ತಾನಕ್ಕೆ ಪ್ರಯಾಣಿಸಲಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಈ ವಿಷಯವನ್ನು ಪ್ರಕಟಿಸಿದರು. ಇಸ್ಲಾಮಾಬಾದ್‌ನಲ್ಲಿ ನಡೆಯಲಿರುವ ಎಸ್‌ಸಿಒ ಶೃಂಗಸಭೆಯಲ್ಲಿ ವಿದೇಶಾಂಗ ಸಚಿವರು ನಮ್ಮ ನಿಯೋಗವನ್ನು ಮುನ್ನಡೆಸುತ್ತಾರೆ" ಎಂದು ಮಾಧ್ಯಮಗೋಷ್ಠಿಯಲ್ಲಿ ರಣಧೀರ್ ಜೈಸ್ವಾಲ್ ಹೇಳಿದರು.

ಪಾಕಿಸ್ತಾನ ಅ.15 ಮತ್ತು 16ರಂದು SCO ಕೌನ್ಸಿಲ್ ಆಫ್ ಹೆಡ್ಸ್ ಆಫ್ ಗವರ್ನಮೆಂಟ್ (CHG) ಸಭೆ ಆಯೋಜಿಸಿದೆ.

ವಿದೇಶಾಂಗ ಸಚಿವರು ಎಸ್‌ಸಿಒ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಮಾತ್ರ ಪಾಕಿಸ್ತಾನಕ್ಕೆ ತೆರಳುತ್ತಿದ್ದಾರೆ ಎಂದು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.

ಎಸ್‌ಸಿಒ ಶೃಂಗಸಭೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗಸ್ಟ್‌ನಲ್ಲಿ ಪಾಕಿಸ್ತಾನ ಆಹ್ವಾನಿಸಿತ್ತು.

Category
ಕರಾವಳಿ ತರಂಗಿಣಿ