image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕರಾಚಿ : ಆತ್ಮಾಹುತಿ ದಾಳಿ: ಇಬ್ಬರು ಚೀನಿಯರು ಸಾವು

ಕರಾಚಿ : ಆತ್ಮಾಹುತಿ ದಾಳಿ: ಇಬ್ಬರು ಚೀನಿಯರು ಸಾವು

ಕರಾಚಿ: ಬಲೂಚ್ ಲಿಬರೇಶನ್ ಆರ್ಮಿ (ಬಿಎಲ್ಎ) ಪ್ರತ್ಯೇಕತಾವಾದಿ ಗುಂಪು ಈ ಸ್ಫೋಟದ ಜವಾಬ್ದಾರಿಯನ್ನು ವಹಿಸಿಕೊಂಡಿದೆ. ಪಾಕಿಸ್ತಾನದ ಅತಿದೊಡ್ಡ ಮತ್ತು ಜನನಿಬಿಡ ವಾಯುಯಾನ ಕೇಂದ್ರವಾದ ಜಿನ್ನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಚೀನಾದ ಎಂಜಿನಿಯರ್​ಗಳು ಮತ್ತು ಹೂಡಿಕೆದಾರರ ಬೆಂಗಾವಲು ಪಡೆಯನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ದಾಳಿ ನಡೆಸಲಾಗಿದೆ ಎಂದು ಬಿಎಲ್​ಎ ಹೇಳಿಕೊಂಡಿದೆ

ಕರಾಚಿ ವಿಮಾನ ನಿಲ್ದಾಣದ ಬಳಿ ಭಾನುವಾರ ತಡರಾತ್ರಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಇಬ್ಬರು ಚೀನೀಯರು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಸ್ಫೋಟದಲ್ಲಿ ಚೀನಾದ ಪ್ರಜೆಗಳು ಸಾವನ್ನಪ್ಪಿರುವುದನ್ನು ಸೋಮವಾರ ದೃಢಪಡಿಸಿದ ಇಸ್ಲಾಮಾಬಾದ್​ನಲ್ಲಿರುವ ಚೀನಾ ರಾಯಭಾರ ಕಚೇರಿ ದಾಳಿಯನ್ನು ತೀವ್ರವಾಗಿ ಖಂಡಿಸಿದೆ.

ಪೋರ್ಟ್ ಖಾಸಿಮ್ ಎಲೆಕ್ಟ್ರಿಕ್ ಪವರ್ ಕಂಪನಿ (ಪ್ರೈವೇಟ್) ಲಿಮಿಟೆಡ್​ನಿಂದ ಚೀನಾದ ಸಿಬ್ಬಂದಿಯನ್ನು ಸಾಗಿಸುತ್ತಿದ್ದ ಬೆಂಗಾವಲು ವಾಹನದ ಮೇಲೆ ದಾಳಿ ನಡೆಸಿ ಅದನ್ನು ಸ್ಫೋಟಿಸಲಾಗಿದೆ. ಪಾಕಿಸ್ತಾನದ ಬಂದರು ನಗರ ಕರಾಚಿಯ ಜಿನ್ನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಸ್ಫೋಟದಿಂದ ಕನಿಷ್ಠ 7 ಜನರು ಗಾಯಗೊಂಡಿದ್ದಾರೆ.

ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಈ ಘಟನೆಯನ್ನು ಬಲವಾಗಿ ಖಂಡಿಸಿದ್ದಾರೆ. "ಚೀನಾದ ನಾಯಕತ್ವಕ್ಕೆ ಮತ್ತು ಚೀನಾದ ಜನರಿಗೆ ನನ್ನ ತೀವ್ರ ಸಂತಾಪಗಳು" ಎಂದು ಷರೀಫ್ ಎಕ್ಸ್​ನಲ್ಲಿ ಪೋಸ್ಟ್​ ಮಾಡಿದ್ದಾರೆ. "ನಮ್ಮ ಚೀನೀ ಸ್ನೇಹಿತರನ್ನು ರಕ್ಷಿಸಲು ಪಾಕಿಸ್ತಾನ ಬದ್ಧವಾಗಿದೆ. ಅವರ ಸುರಕ್ಷತೆ ಮತ್ತು ಯೋಗಕ್ಷೇಮದ ರಕ್ಷಣೆಗಾಗಿ ನಾವು ಅಗತ್ಯವಿರುವುದೆಲ್ಲವನ್ನೂ ಮಾಡುತ್ತೇವೆ" ಎಂದು ಅವರು ಬರೆದಿದ್ದಾರೆ.

ಕೆಲವೇ ದಿನಗಳಲ್ಲಿ ಇಸ್ಲಾಮಾಬಾದ್​ನಲ್ಲಿ ಚೀನಾ ಮತ್ತು ರಷ್ಯಾ ನೇತೃತ್ವದ ಭದ್ರತಾ ಗುಂಪಿನ ಶಾಂಘೈ ಸಹಕಾರ ಸಂಘಟನೆಯ ಸರ್ಕಾರಗಳ ಮುಖ್ಯಸ್ಥರ ಸಭೆ ನಡೆಯಲಿದ್ದು, ಅದಕ್ಕೂ ಮುನ್ನ ಕರಾಚಿಯಲ್ಲಿ ಆತ್ಮಾಹುತಿ ದಾಳಿ ನಡೆದಿರುವುದು ಆತಂಕ ಮೂಡಿಸಿದೆ.

Category
ಕರಾವಳಿ ತರಂಗಿಣಿ